ಚಿರತೆ ದಾಳಿಯಿಂದ ಗಾಯಗೊಂಡು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಬಿಜೆಪಿ ಮುಖಂಡ ಬಿ.ಸಿ. ಪಾಟೀಲ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು
ಹಾವೇರಿ: ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಕಣವಿಸಿದ್ಧಗೇರಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ರೈತ ಬೀರೇಶ ಬೆಳಗಾವಿ (28) ಎಂಬುವವರು ಮೃತಪಟ್ಟಿದ್ದಾರೆ.
ಗ್ರಾಮದ ನಿವಾಸಿ ಬೀರೇಶ ಅವರು ಶುಕ್ರವಾರ ರಾತ್ರಿ ತಮ್ಮ ಜಮೀನಿನಲ್ಲಿದ್ದ ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಈ ಅವಘಡ ಸಂಭವಿಸಿದೆ.
ಅವಘಡದಲ್ಲಿ ಬೀರೇಶ ಅವರ ಸಹೋದರ ಸಹ ಗಾಯಗೊಂಡಿದ್ದು, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರೂ ಸಹೋದರರು ಮೆಕ್ಕೆಜೋಳಕ್ಕೆ ನೀರು ಹಾಯಿಸಲು ರಾತ್ರಿ 11 ಗಂಟೆ ಸುಮಾರಿಗೆ ಜಮೀನಿಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ ಜಮೀನಿಗೆ ಬಂದಿದ್ದ ಚಿರತೆ, ಬೀರೇಶ ಹಾಗೂ ಅವರ ಸಹೋದರನ ಮೇಲೆ ದಾಳಿ ಮಾಡಿತ್ತು.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದರು.
ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.