ADVERTISEMENT

ರಾಣೆಬೆನ್ನೂರು | ಚಿರತೆ ದಾಳಿ: ಕೃಷ್ಣಮೃಗ ಸಾವು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 2:53 IST
Last Updated 8 ಫೆಬ್ರುವರಿ 2026, 2:53 IST
ರಾಣೆಬೆನ್ನೂರು ತಾಲ್ಲೂಕಿನ ಕುಸಗೂರ ಗ್ರಾಮದ ಅರಣ್ಯ ಪ್ರದೇಶ ಸಮೀಪದ ರೈತರ ಜಮೀನಿನಲ್ಲಿ ಚಿರತೆ ದಾಳಿ ಮಾಡಿ ಕೃಷ್ಣ ಮೃಗದ ಮೇಲೆ ದಾಳಿ ಮಾಡಿದ್ದಕ್ಕೆ ಒಂದು ಕೃಷ್ಣಮೃಗ ಸಾವನ್ನಪ್ಪಿದೆ.
ರಾಣೆಬೆನ್ನೂರು ತಾಲ್ಲೂಕಿನ ಕುಸಗೂರ ಗ್ರಾಮದ ಅರಣ್ಯ ಪ್ರದೇಶ ಸಮೀಪದ ರೈತರ ಜಮೀನಿನಲ್ಲಿ ಚಿರತೆ ದಾಳಿ ಮಾಡಿ ಕೃಷ್ಣ ಮೃಗದ ಮೇಲೆ ದಾಳಿ ಮಾಡಿದ್ದಕ್ಕೆ ಒಂದು ಕೃಷ್ಣಮೃಗ ಸಾವನ್ನಪ್ಪಿದೆ.   

ರಾಣೆಬೆನ್ನೂರು: ತಾಲ್ಲೂಕಿನ ಕುಸಗೂರ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಚಿರತೆ ದಾಳಿಗೆ ಕೃಷ್ಣಮೃಗ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.

ಚಿರತೆ ದಾಳಿಯಿಂದ ಅರಣ್ಯ ಪ್ರದೇಶದ ಸುತ್ತಮುತ್ತಲಿನ ರೈತರು ಕೃಷಿ ಚಟುವಟಿಕೆಗಳಿಗೆ ಜಮೀನುಗಳಿಗೆ ಹೋಗಲು ಭಯ ಭೀತರಾಗಿದ್ದಾರೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

‘ಅರಣ್ಯ ಇಲಾಖೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದು, ಚಿರತೆ ಸೆರೆ ಹಿಡಿಯಲು ಬೋನ್‌ ಅಳವಡಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದು ಅರಣ್ಯ ಇಲಾಖೆ ಅಧಿಕಾರಿ ಮಹೇಶ ನಾಯಕ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.