ರಟ್ಟೀಹಳ್ಳಿ: ರಟ್ಟೀಹಳ್ಳಿ ತಾಲ್ಲೂಕಿನ ಕಡೂರ ಗ್ರಾಮದ ತುಂಗಾ ಮೇಲ್ದಂಡೆ ಮುಖ್ಯ ಕಾಲುವೆ ಬಳಿ ನಾಲ್ಕು ವರ್ಷ ವಯಸ್ಸಿನ ಗಂಡು ಚಿರತೆ ಶವ ಗುರುವಾರ ಪತ್ತೆಯಾಗಿದೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ಹೇಮಂತ, ವಿಷಮಿಶ್ರಿತ ಆಹಾರ ಸೇವನೆಯಿಂದ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಹಿರೇಕೆರೂರ ಪಶುಚಿಕಿತ್ಸಾಲಯಕ್ಕೆ ಚಿರತೆಯನ್ನು ಸಾಗಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.