ರಾಣೆಬೆನ್ನೂರು: ಪ್ರತಿಯೊಬ್ಬರೂ ಕಾನೂನು ಅರಿವು ಪಡೆಯಬೇಕು. ಆಗ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಅಪರ ಸರ್ಕಾರಿ ವಕೀಲ ಟಿ. ಎಸ್. ಜಂಗರಡ್ಡೇರ ಹೇಳಿದರು.
ಇಲ್ಲಿನ ಕೆ.ಎಲ್.ಇ. ಸಂಸ್ಥೆಯ, ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಈಚೆಗೆ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀರ ಸಂಘ, ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನ್ಯಾಯಾಧೀಶರಾದ ಮಂಜುನಾಥ. ಎಂ.ಎಸ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ಪ್ರತಿಬಂದ ಅಧಿನಿಯಮ 1989 ರ ಅನ್ವಯ ಯಾರೂ ಕೀಳು ಮಟ್ಟದಲ್ಲಿ ಕಾಣುವ ಹಾಗಿಲ್ಲ. ಸಮಾನತೆಯಿಂದ ಕಾಣಬೇಕು ಎಂದು ತಿಳಿಸಿದರು.
ಪ್ಯಾನಲ್ ವಕೀಲೆ ಸುಮಾ ಆರ್. ಸಾವುಕಾರ ಅವರು ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳು ಮತ್ತು ಅವುಗಳನ್ನು ಕಾನೂನು ರೀತಿಯಲ್ಲಿ ಯಾವ ರೀತಿ ಕ್ರಮ ತೆಗೆದುಕೊಳ್ಳಬಹುದು ಎನ್ನುವ ಬಗ್ಗೆ ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಾಲತೇಶ ಸಿ.ಬಿ ಮಾತನಾಡಿದರು. ಕೆ.ಎಲ್.ಇ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಬಿ.ಎಸ್. ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಬಿ .ಎಚ್. ಬುರಡಿಕಟ್ಟಿ, ಉಪಾಧ್ಯಕ್ಷ ಹೊನ್ನಪ್ಪ ಎಚ್. ತಿಮ್ಮೇನಹಳ್ಳಿ, ಪ್ರಾಚಾರ್ಯ ನಾರಾಯಣ ನಾಯಕ ಎ, ಪ್ರೊ. ನಾಗರಾಜ ಗವಿಯಪ್ಪನವರ, ಪ್ರೊ. ರತ್ನವ್ವ ಹಾದಿಮನಿ, ಛಾಯಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.