ಹಾನಗಲ್: ತಾಲ್ಲೂಕು ಮಟ್ಟದ ಲಿಂಗಾಯತ ಪಂಚಮಸಾಲಿ ಸಮಾಜದ ಸಮಾವೇಶವನ್ನು ತಾಲ್ಲೂಕಿನ ನೀರಲಗಿ ಗ್ರಾಮದ ಬಸವೇಶ್ವರ ಭವನದಲ್ಲಿ ಆಗಸ್ಟ್ 16 ರಂದು ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.
ಸಮಾಜದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮಾಜಿ ಸೈನಿಕರು, ಪ್ರಗತಿಪರ ರೈತರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಮಹದೇವಪ್ಪ ಬಾಗಸರ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ
ಹೆಬ್ಬಾಳಕರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಜಯಾನಂದ ಕಾಶಪ್ಪನವರ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ಕರ್ನಾಟಕ ನಗರ ನೀರು
ಸರಬರಾಜು, ಒಳ ಚರಂಡಿ ಮಂಡಳಿ ಅಧ್ಯಕ್ಷ ವಿನಯ ಕುಲಕರ್ಣಿ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಮಾಜದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಕೋತಂಬರಿ, ಕಾರ್ಯದರ್ಶಿ ಮಧು ಪಾಣಿಗಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಖಂಡ ಭಾರತ ಸಂಕಲ್ಪ ದಿನ ಆಚರಣೆ
ಹಾನಗಲ್: ಹಾನಗಲ್‌ನ ಹಿಂದೂ ಜಾಗರಣಾ ವೇದಿಕೆ ಆಗಸ್ಟ್ 13 ರಂದು ಅಖಂಡ ಭಾರತ ಸಂಕಲ್ಪ ದಿನ ಆಚರಿಸುತ್ತಿದ್ದು, ವಾಗ್ಮಿ ಹಾರಿಕಾ ಮಂಜುನಾಥ ಪಾಲ್ಗೊಳ್ಳುವರು.
ಮಂಗಳವಾರ ಸಂಜೆ 7 ಗಂಟೆಗೆ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಗಣಪತಿ ದೇವಸ್ಥಾನದಿಂದ ಪಂಜಿನ ಮೆರವಣಿಗೆ ಆರಂಭವಾಗಿ ಕಮಾಟಗೇರಿ, ಪಾದಗಟ್ಟಿ, ಸಾಲಗೇರಿ, ಸೋಮವಾರ
ಪೇಟೆ, ಚೌಡಿ ಕತ್ರಿ ಮೂಲಕ ಶಂಕರಮಠ ತಲುಪುವುದು. ನಂತರ ಇಲ್ಲಿನ ಶಂಕರ ಮಠದ ಆವರಣದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಬಿ.ಶಿವಬಸವ ವಹಿಸುವರು ಎಂದು
ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.