ಹೃದಯಾಘಾತ
ಬ್ಯಾಡಗಿ: ತಾಲ್ಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಚಾಲಕನೊಬ್ಬ ವಾಹನ ನಡೆಸುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಿಸದೆ ಮಂಗಳವಾರ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಚಾಲಕ ಬಾಬುರಾವ್ ಖಮ್ಮಟ್(50) ಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಲಾರಿ ಚಲಿಸುತ್ತಿರುವಾಗ ಈ ಘಟನೆ ಸಂಭವಿಸಿದೆ. ಲಾರಿ ಚಲಿಸುವ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡ ಕೂಡಲೆ ಆತನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಖಾಸಗಿ ಅಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.