
ಪ್ರಜಾವಾಣಿ ವಾರ್ತೆ
ಶಿಗ್ಗಾವಿ: ಆಡುಗಳನ್ನ ಸಾಗಿಸುತ್ತಿದ್ದ ಲಾರಿಯೊಂದು ಟೈಯರ್ ಸ್ಫೋಟಗೊಂಡ ಪರಿಣಾಮ ಲಾರಿ ಪಲ್ಟಿಯಾಗಿ 180 ಆಡುಗಳಲ್ಲಿ 20 ಆಡುಗಳು ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ.
ಗುಜರಾತನಿಂದ ಮಂಡ್ಯ ಕಡೆಗೆ ಆಡುಗಳನ್ನು ತುಂಬಿಕೊಂಡು ಹೋಗುತ್ತಿದ್ದು ಲಾರಿ, ಟೈಯರ್ ಸ್ಫೋಟಗೊಂಡು ಹೆದ್ದಾರಿ ತಡೆ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ. ಗಾಯಗೊಂಡ ಆಡುಗಳಿಗೆ ಸ್ಥಳೀಯ ಪಶು ವೈದ್ಯಾಧಿಕಾರಿ ರಾಜೇಂದ್ರ ಅವರ ತಂಡದಿಂದ ಚಿಕಿತ್ಸೆ ನೀಡಲಾಗಿದೆ.
ಘಟನೆ ಕುರಿತು ಶಿಗ್ಗಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.