ADVERTISEMENT

ಹಾವೇರಿ | ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 3:09 IST
Last Updated 27 ಆಗಸ್ಟ್ 2025, 3:09 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಹಾವೇರಿ: ಪರಿಶಿಷ್ಟ ವರ್ಗದವರ ಏಳಿಗೆಗಾಗಿ ಶ್ರಮಿಸಿದವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಪರಿಶಿಷ್ಟ ವರ್ಗದ ಜನರಿಗಾಗಿ ಸೇವೆ ಸಲ್ಲಿಸಿರಬೇಕು. ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಿರಬೇಕು. 35 ವರ್ಷ ವಯಸ್ಸಾಗಿರಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು. ಅರ್ಹರು ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಅಥವಾ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದುಕೊಳ್ಳಬಹುದು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸೆ. 10ರೊಳಗಾಗಿ ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕರಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.