ADVERTISEMENT

ಮಹಾತ್ಮ ಗಾಂಧೀಜಿ ವಿಶ್ವಕ್ಕೆ ಪಿತಾಮಹ: ಮುಖ್ಯಶಿಕ್ಷಕ ಯೋಗೇಂದ್ರ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 4:02 IST
Last Updated 3 ಅಕ್ಟೋಬರ್ 2025, 4:02 IST
ತಿಳವಳ್ಳಿಯ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನ ಆಚರಿಸಲಾಯಿತು
ತಿಳವಳ್ಳಿಯ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನ ಆಚರಿಸಲಾಯಿತು   

ತಿಳವಳ್ಳಿ: ‘ಶಾಂತಿ, ಸತ್ಯ, ಅಹಿಂಸಾ ಮಾರ್ಗದ ಮೂಲಕ ಜಗತ್ತನ್ನು ಗೆಲ್ಲಬಹುದು ಎಂಬ ಸಂದೇಶ ಸಾರಿದ ಮಹಾತ್ಮ ಗಾಂಧೀಜಿ ಅವರು ಇಡೀ ವಿಶ್ವಕ್ಕೆ ಪಿತಾಮಹರಾಗಿದ್ದಾರೆ’ ಎಂದು ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ಯೋಗೇಂದ್ರ ಆಚಾರ್ಯ ಹೇಳಿದರು.

ಇಲ್ಲಿನ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕಿ ಉಮಾದೇವಿ ಎಂ.ಎನ್ ಮಾತನಾಡಿ, ‘ಮಹಾತ್ಮ ಗಾಂಧೀಜಿ ಅವರು ಮಹಾನ್ ಮಾನವತಾವಾದಿ, ಸಮಾಜವದಿಯಾಗಿ ಶಾಂತಿ ಅಹಿಂಸೆ ಮೂಲಕ ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಲಾಲ್ ಬಹದ್ದೂರ ಶಾಸ್ತ್ರಿ ಅವರು ಅಪ್ಪಟ ಗಾಂಧಿವಾದಿಯಾಗಿ, ದೇಶದ ಎರಡನೇ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಿದರು’ ಎಂದು ಅವರು ಸ್ಮರಿಸಿದರು.

ADVERTISEMENT

ಶಿಕ್ಷಕಿ ಸುಧಾ ಹುಲ್ಲತ್ತಿ, ವಿದ್ಯಾ ಪವಾರ, ಅನ್ನಪೂರ್ಣ ಎಸ್, ಗಾಯತ್ರಿ ಬಡಿಗೇರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.