
ಪ್ರಜಾವಾಣಿ ವಿಶೇಷಕಬ್ಬು ಬೆಲೆ ಹೋರಾಟ ತಣ್ಣಗಾದ ಬೆನ್ನಲ್ಲೇ ಮೆಕ್ಕೆಜೋಳ ಬೆಲೆಗಾಗಿ ರೈತರು ಹೋರಾಟ ಆರಂಭಿಸಿದ್ದಾರೆ. ಮೆಕ್ಕೆಜೋಳವನ್ನು ಹೆಚ್ಚಾಗಿ ಬೆಳೆಯುವ ಹಾವೇರಿ, ಗದಗ ಜಿಲ್ಲೆಯಲ್ಲಿ ಹೋರಾಟದ ಕಾವು ಹೆಚ್ಚಾಗಿದೆ. ಹಾವೇರಿಯಲ್ಲಿ ‘ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ’ಯ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಮೆಕ್ಕೆಜೋಳಕ್ಕೆ ₹ 3,000 ನೀಡಬೇಕು ಹಾಗೂ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ತೆರೆಯಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.