ADVERTISEMENT

‘ಅಪೌಷ್ಟಿಕ ಮುಕ್ತ ಗ್ರಾಮವನ್ನಾಗಿ ಮಾಡಿ’

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 13:51 IST
Last Updated 9 ಸೆಪ್ಟೆಂಬರ್ 2020, 13:51 IST
ಹಾವೇರಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮ ಅಂಗವಾಗಿ ಡಾ.ದಿಲೀಷ್ ಶಶಿ ಅವರು ಜಾಗೃತಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು 
ಹಾವೇರಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮ ಅಂಗವಾಗಿ ಡಾ.ದಿಲೀಷ್ ಶಶಿ ಅವರು ಜಾಗೃತಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು    

ಹಾವೇರಿ: ಗ್ರಾಮಗಳಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಗುರುತಿಸಿ ಸೂಕ್ತ ವೈದ್ಯಕೀಯ ತಪಾಸಣೆ ಹಾಗೂ ಪೌಷ್ಟಿಕ ಆಹಾರ ವಿತರಣೆ ಮೂಲಕ ಅಪೌಷ್ಟಿಕ ಮುಕ್ತ ಗ್ರಾಮಗಳಾಗಿ ಘೋಷಣೆ ಮಾಡಲು ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಆಂದೋಲನದ ರೀತಿಯಲ್ಲಿ ಕೈಗೊಳ್ಳುವಂತೆ ಹಾವೇರಿ ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ ಸೂಚನೆ ನೀಡಿದರು.

ಹಾವೇರಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಜಾಗೃತಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ತಾಲ್ಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತರು ಮನೆ–ಮನೆಗೆ ಭೇಟಿ ನೀಡಿ ತೀವ್ರ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಗುರುತಿಸಬೇಕು. ಈ ಮಕ್ಕಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆಗೆ ನಡೆಸಬೇಕು. ಹೆಚ್ಚಿನ ಚಿಕಿತ್ಸೆ ಅವಶ್ಯವಿರುವ ಮಕ್ಕಳನ್ನು ಎನ್.ಆರ್.ಸಿ.ಗೆ ದಾಖಲಿಸಬೇಕು. ಮಕ್ಕಳ ಪಾಲಕರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ಕ್ರಮಗಳ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ ಮಾತನಾಡಿ, ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವಿವರಿಸಿದರು.

ಹಾವೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ,ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮೇಲ್ವಿಚಾರಕಿಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.