ರಾಣೆಬೆನ್ನೂರು: ವಿಶ್ವಕ್ಕೆ ಮಾದರಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಾಮಾಜಿಕ ಕಳಕಳಿಯ ಮನ್ ಕಿ ಬಾತ್ ಕಾರ್ಯಕ್ರಮ ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ‘125ನೇ ಮನ್ ಕಿ ಬಾತ್’ ಕಾರ್ಯಕ್ರಮ ವೀಕ್ಷಿಸುವುದರಲ್ಲಿ ಕರ್ನಾಟಕ ರಾಜ್ಯದಲ್ಲಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರ (ಉತ್ತರ ಕರ್ನಾಟಕದಲ್ಲಿ ಪ್ರಥಮ ಸ್ಥಾನ) 10ನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಭಾಷಣವನ್ನು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಆಲಿಸುವ ಮಾಲಕ ರಾಜ್ಯದ ಸಾಧನೆಯನ್ನು ತಿಳಿದುಕೊಂಡಿದ್ದಾರೆ. ಈ ಕುರಿತು ರಾಜ್ಯ ಮತ್ತು ರಾಷ್ಟ್ರದ ಬಿಜೆಪಿ ವತಿಯಿಂದ ಅಧೀಕೃತವಾಗಿ ಪ್ರಶಂಸೆಯ ಪತ್ರ ತಮಗೆ ಕಳಿಸಿದ್ದು ಸಂತೋಷ ತಂದಿದೆ ಎಂದರು.
ಮುಂದಿನ ಮನ್ ಕಿ ಬಾತ್ ನಲ್ಲಿ ಈ ಕ್ಷೇತ್ರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಲು ಕಾರ್ಯಕರ್ತರು ಮುಂದಾಗಬೇಕು. ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರ ತಡೆಯಲು ಹಾಗೂ ಭಕ್ತರ ಭಾವನೆಗೆ ಧಕ್ಕೆ ತಂದಿರುವ ಅಪಪ್ರಚಾರಿಗಳ ಕುರಿತು ಸೆ.1ರಂದು ಧರ್ಮಸ್ಥಳ ಜಾಥಾಕ್ಕೆ ರಾಣೆಬೆನ್ನೂರಿನಿಂದ 350ಕ್ಕೂ ಹೆಚ್ಚಿನ ಕಾರ್ಯಕರ್ತರು ತೆರಳಲಿದ್ದಾರೆ ಎಂದರು.
ಸುಕ್ಷೇತ್ರ ಧರ್ಮಸ್ಥಳದ ಕುರಿತು ಬುರುಡೆ ಗ್ಯಾಂಗ್ ಮಾಡಿರುವ ಅನೈತಿಕ, ಅನ್ಯಾಯದ ಪ್ರಹಸನಕ್ಕೆ ಸರ್ಕಾರ ಕಡಿವಾಣ ಹಾಕಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ರಾಜ್ಯ ಬಿಜೆಪಿ ಈ ಕಾರ್ಯಕ್ರಮವನ್ನು ಲಕ್ಷಾಂತರ ಕಾರ್ಯಕರ್ತರೊಂದಿಗೆ ಧರ್ಮಸ್ಥಳ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ನಿಂಗರಾಜ ಕೋಡಿಹಳ್ಳಿ, ಚೋಳಪ್ಪ ಕಸವಾಳ, ಸಿದ್ದಣ್ಣ ಚಿಕ್ಕಬಿದರಿ, ಶಿವುಕುಮಾರ ನರಸಗೊಂಡರ, ಮಂಜುನಾಥ ಓಲೇಕಾರ, ಪ್ರಕಾಶ ಪೂಜಾರ, ಭಾರತಿ ಜಂಬಗಿ, ಪವನಕುಮಾರ್ ಮಲ್ಲಾಡದ, ಅಮೋಘ ಬಾದಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.