ದಿಲೀಪ
ರಾಣೆಬೆನ್ನೂರು: ವ್ಯಕ್ತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.
ತಾಲ್ಲೂಕಿನ ಕಾಕೋಳ ಗ್ರಾಮದ ನಿವಾಸಿ ರೈಲ್ವೆ ನೌಕರ ದಿಲೀಪ ಉರ್ಫ ದಿಳ್ಳೆಪ್ಪ ತಂದೆ ಬೀರಪ್ಪ ಹಿತ್ತಲಮನಿ (33) ಕೊಲೆಯಾದ ವ್ಯಕ್ತಿ. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ರಾಜು ಈರಯ್ಯ ಬಿಳಸನೂರಮಠ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಗಾಯಗೊಂಡ ದಿಲೀಪನನ್ನು ಗ್ರಾಮಸ್ಥರು ನಗರದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ದಿಲೀಪ ಕಾಕೋಳ ಗ್ರಾಮದವನಾಗಿದ್ದು, ತಾಲ್ಲೂಕಿನ ಚಳಗೇರಿಯ ರೈಲು ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಮಹಿಳೆಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಡಿವೈಎಸ್‌ಪಿ ಲೊಕೋಶ ಜೆ., ಸಿಪಿಐ ಪ್ರವೀಣಕುಮಾರ, ಪಿಎಸ್‌ಐ ನಿಂಗಜ್ಜೇರ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.