ADVERTISEMENT

‘ಮಲಬಾಚುವ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಿ’

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2019, 15:19 IST
Last Updated 31 ಡಿಸೆಂಬರ್ 2019, 15:19 IST
   

ಹಾವೇರಿ: ರಾಜ್ಯ ಸರ್ಕಾರ 2013ರಲ್ಲಿ ಮಲಬಾಚುವ ಪದ್ಧತಿ (ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌) ನಿರ್ಮೂಲನೆ ಹಾಗೂ ಕಾರ್ಮಿಕರ ಪುನರ್ವಸತಿ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟಕದಿಂದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ರಾಜ್ಯ ಸಂಚಾಲಕ ಕೆ.ಬಿ. ಓಬಳೇಶ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ 2013ರಿಂದ 2018ರವರೆಗೆ 2995 ಮಲಬಾಚುವ ಕುಟುಂಬಗಳನ್ನು ಗುರುತಿಸಲಾಗಿದೆ. ಹಾವೇರಿ ನಗರದಲ್ಲಿ 60 ಕುಟುಂಬಗಳಿವೆ. ಇನ್ನೂ ಗ್ರಾಮೀಣ ಭಾಗದಲ್ಲಿ ಇಂತಹ ಕುಟುಂಬಗಳನ್ನು ಗುರುತಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಬೇಕಿದೆ. ಈ ಎಲ್ಲ ಕುಟುಂಬಗಳಿಗೆ ಪರ್ಯಾಯ ಉದ್ಯೋಗ ಹಾಗೂ ಅಗತ್ಯ ಹಣಕಾಸಿನ ನೆರವನ್ನು ನೀಡಬೇಕು ಎಂದು ಆಗ್ರಹಿಸಿದರು.

ಈ ಅನಿಷ್ಟ ಪದ್ಧತಿ ನಿರ್ಮೂಲನೆ ಮಾಡಬೇಕು. ಈ ಕಾರ್ಮಿಕರ ಅಭಿವೃದ್ಧಿಗಾಗಿ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆ ಈಡೇರಿಕೆಗಾಗಿ ಜಾಥಾದ ಮೂಲಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸುತ್ತೇವೆ. ಈ ಜಾಥಾ ರಾಜ್ಯದಲ್ಲಿ ನಾಲ್ಕು ಹಂತಗಳಲ್ಲಿ ನಡೆಯಲಿದ್ದು, ಜ.16ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ ಎಂದು ಹೇಳಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿಡಾ.ಚಂದ್ರಶೇಖರ, ಸುಭಾಶ ಬೆಂಗಳೂರು, ದಲಿತ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.