ADVERTISEMENT

‘ಕೇಂದ್ರ ಸರ್ಕಾರದಿಂದ ಪಂಚಾಯ್ತಿಗಳಿಗೆ ಶಕ್ತಿ’

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 15:20 IST
Last Updated 7 ಡಿಸೆಂಬರ್ 2021, 15:20 IST
ಹಿರೇಕೆರೂರು ತಾಲ್ಲೂಕಿನ ಅಬಲೂರು ಗ್ರಾಮದಲ್ಲಿ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್‌ ಪರವಾಗಿ  ಮಂಗಳವಾರ ಕೃಷಿ ಸಚಿವ ಬಿ.ಸಿ.ಪಾಟೀಲ ಮತಯಾಚಿಸಿದರು
ಹಿರೇಕೆರೂರು ತಾಲ್ಲೂಕಿನ ಅಬಲೂರು ಗ್ರಾಮದಲ್ಲಿ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್‌ ಪರವಾಗಿ  ಮಂಗಳವಾರ ಕೃಷಿ ಸಚಿವ ಬಿ.ಸಿ.ಪಾಟೀಲ ಮತಯಾಚಿಸಿದರು   

ಹಿರೇಕೆರೂರು: ತಾಲ್ಲೂಕಿನ ಅಬಲೂರು, ಸುತ್ತಕೋಟಿ, ಎತ್ತಿನಹಳ್ಳಿ (ಎಂ.ಕೆ) ಮೊದಲಾದ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಅವರು ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್‌ ಪರವಾಗಿ ಗ್ರಾ.ಪಂ. ಸದಸ್ಯರಲ್ಲಿ ಮತಯಾಚಿಸಿದರು.

‘ಕೇಂದ್ರ ಸರ್ಕಾರ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150ಕ್ಕೆ ಹೆಚ್ಚಿಸಿ ಗ್ರಾಮ ಪಂಚಾಯ್ತಿಗಳಿಗೆ ಮತ್ತಷ್ಟು ಶಕ್ತಿ ನೀಡಿದೆ. ಪ್ರತಿ ಹಳ್ಳಿಗಳಿಗೆ ಜಲಜೀವನ ಮಿಷನ್‌ ಮೂಲಕ ಮನೆ ಮನೆಗೆ ನೀರು ಪೂರೈಸಲು ಕೇಂದ್ರ ಸರ್ಕಾರ ಅನುದಾನ ನೀಡಿದೆ’ ಎಂದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಮಾತನಾಡಿದರು.ಶಿಲ್ಪಾ ಶೆಟ್ಟರ್‌, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಿ.ಸಿ.ಪಾಟೀಲ, ತಾಲ್ಲೂಕು ಘಟಕದ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ, ಎನ್.ಎಂ.ಈಟೇರ, ಸುಮಿತ್ರಾ ಪಾಟೀಲ, ಜಿ.ಪಿ.ಪ್ರಕಾಶ, ದೇವರಾಜ ನಾಗಣ್ಣನವರ, ರವಿಶಂಕರ ಬಾಳಿಕಾಯಿ, ವಿ.ಎಸ್.ಪುರದ, ರೂಪಾ ಆಡೂರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.