ADVERTISEMENT

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ: ಶಾಸಕ ಬಸವರಾಜ ಶಿವಣ್ಣನವರ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 15:47 IST
Last Updated 30 ಜುಲೈ 2024, 15:47 IST
ಬ್ಯಾಡಗಿಯಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಬಸವರಾಜ ಶಿವಣ್ಣನವರ ಮಂಗಳವಾರ ಭೂಮಿಪೂಜೆ ನೆರವೇರಿಸಿದರು
ಬ್ಯಾಡಗಿಯಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಬಸವರಾಜ ಶಿವಣ್ಣನವರ ಮಂಗಳವಾರ ಭೂಮಿಪೂಜೆ ನೆರವೇರಿಸಿದರು   

ಬ್ಯಾಡಗಿ: ಪಟ್ಟಣದಲ್ಲಿಯೂ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಕಾಮಗಾರಿ ಆರಂಭಿಸುವ ಮೂಲಕ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಪಟ್ಟಣದ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ಉಪ ವಿಭಾಗದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಬಡವರ ಪರವಾಗಿರುವ ಕಾಂಗ್ರೆಸ್‌ ಸರ್ಕಾರ ಅವಶ್ಯವಿರುವ ಎಲ್ಲಾ ಯೋಜನೆಗಳನ್ನು ಅನುಷ್ಟಾನಗೊಳಿಸಲಿದೆ. ಗರೀಬಿ ಹಠಾವೋ ಮೂಲಕ ಮಾಜಿ ಪ್ರಧಾನಿ ಇಂದಿರಾಗಾಂಧಿ ಉತ್ತಮ ಆಡಳಿತ ನೀಡಿದ್ದಾರೆ. ಅವರ ಮುಂದುವರೆದ ಭಾಗವೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.

ADVERTISEMENT

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಾನಪ್ಪ ಚೂರಿ, ಮುಖಂಡಂರಾದ ಬೀರಪ್ಪ ಬಣಕಾರ, ರಮೇಶ ಸುತ್ತಕೋಟಿ, ಶಿವಪುತ್ರಪ್ಪ ಅಗಡಿ, ಪುರಸಭೆ ಸದಸ್ಯರಾದ ಫಕ್ಕೀರಮ್ಮ ಛಲವಾದಿ, ರೇಷ್ಮಾಬಾನು ಶೇಖ್, ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.