
ಹಾನಗಲ್ ತಾಲ್ಲೂಕಿನ ಮಂತಗಿ ಗ್ರಾಮದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು
ಹಾನಗಲ್: ತಾಲ್ಲೂಕಿನ ಮಂತಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹1.41 ಕೋಟಿ ವೆಚ್ಚದಲ್ಲಿ ಗುರುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ತಾಲ್ಲೂಕಿನ ಸಾಗರವಳ್ಳಿ, ಮಂತಗಿ, ಲಕ್ಷ್ಮೀಪುರ, ಕಾಮನಹಳ್ಳಿ, ಶಿವಪುರ, ಕಾಮನಹಳ್ಳಿ ತಾಂಡಾದಲ್ಲಿ ಸಿ.ಸಿ ರಸ್ತೆ, ಚರಂಡಿ, ರಸ್ತೆ ಅಭಿವೃದ್ಧಿ, ಸಿ.ಡಿ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ‘ರಾಜ್ಯ ಸರ್ಕಾರ ಸಾರ್ಥಕ ಸಾವಿರ ದಿನಗಳನ್ನು ಪೂರೈಸಿದ್ದು, ನುಡಿದಂತೆ ನಡೆದಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆ ಈಡೇರಿಸಲಾಗಿದೆ’ ಎಂದರು.
ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಮುಖಂಡರಾದ ಈರಣ್ಣ ಬೈಲವಾಳ, ಮಾರುತಿ ಕಮಾಟಿ, ರಾಜಕುಮಾರ ಜೋಗಪ್ಪನವರ, ತಿಮ್ಮಣ್ಣ ನೆಗಳೂರ, ಸಂತೋಷ ಹಣಜಿ, ಬಸವರಾಜ ಹಿರೋಜಿ, ಗಣೇಶ ಬಾಳಿಹಳ್ಳಿ, ತಿಮ್ಮಣ್ಣ ವಡ್ಡರ, ಜಾಫರಸಾಬ ಹಿರೂರ, ಜಗದೀಶ ಮಾಯಣ್ಣನವರ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.