ADVERTISEMENT

ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ: ಶಾಸಕ ಯು.ಬಿ.ಬಣಕಾರ

ಹಿರೇಕೆರೂರ: ಸಾರ್ವಜನಿಕ  ಆಸ್ಪತ್ರೆಯಲ್ಲಿ  ಪ್ರಗತಿ  ಪರಿಶೀಲನೆ ಸಭೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 3:06 IST
Last Updated 27 ಆಗಸ್ಟ್ 2025, 3:06 IST
ಹಿರೇಕೆರೂರ ಪಟ್ಟಣದ ಸಾರ್ವಜನಿಕ  ಆಸ್ಪತ್ರೆಯಲ್ಲಿ ಶಾಸಕ ಯು.ಬಿ.ಬಣಕಾರ ಮಂಗಳವಾರ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು
ಹಿರೇಕೆರೂರ ಪಟ್ಟಣದ ಸಾರ್ವಜನಿಕ  ಆಸ್ಪತ್ರೆಯಲ್ಲಿ ಶಾಸಕ ಯು.ಬಿ.ಬಣಕಾರ ಮಂಗಳವಾರ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು   

ಹಿರೇಕೆರೂರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಎಲ್ಲಾ ಸಿಬ್ಬಂದ್ದಿ ಸರಿಯಾಗಿ ಸಮಯ ಪಾಲನೆಯೊಂದಿಗೆ ಉತ್ತಮ ಕಾರ್ಯವನ್ನು ನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸಬೇಕು ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಆಸ್ಪತ್ರೆಯಲ್ಲಿ ಎಲ್ಲಾ ಸಿಬ್ಬಂದ್ದಿ ರೋಗಿಗಳನ್ನು ಆತ್ಮೀಯವಾಗಿ ಕಾಣಬೇಕು ಮತ್ತು ಉತ್ತಮವಾದ ಚಿಕಿತ್ಸೆಯನ್ನು ನೀಡಬೇಕು. ಹಾಜರಾತಿಯನ್ನು ಬಯೋಮೆಟ್ರಿಕ್ ಅಲ್ಲಿಯೆ ಹಾಕಬೇಕು, ಸ್ವಚ್ಛತಾ ಸಿಬ್ಬಂದ್ಧಿ ಸೇರಿದಂತೆ ಎಲ್ಲಾ ಸಿಬ್ಬಂದ್ಧಿಗಳು ಸರಿಯಾಗಿ ಕಾರ್ಯವನ್ನು ಹಂಚಿಕೆ ಮಾಡಿಕೊಂಡು ಕೆಲಸವನ್ನು ನಿರ್ವಹಿಸಬೇಕು ಎಂದರು.

ADVERTISEMENT

ರೋಗಿಗಳಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು. ಶೌಚಾಲಯ ಮತ್ತು ಆಸ್ಪತ್ರೆಯ ಸ್ವಚ್ಛತೆಯನ್ನು ಕಾಡಬೇಕು. ಆಸ್ಪತ್ರೆಯಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಕೆಲಸದಲ್ಲಿ ಸುಧಾರಣೆ ಮಾಡಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಝೆಡ್. ಆರ್. ಮಕಾನದರ , ಆಡಳಿತ ವೈದ್ಯಾಧಿಕಾರಿ ಹ್ಯಾಡರ ಮಲ್ಲಪ್ಪ , ವೈದ್ಯರಾದ ಡಾ.ಮಹಾಂತೇಶ , ಡಾ. ಮಂಜುನಾಥ ಮತ್ತು ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.