ADVERTISEMENT

‘16ನೇ ಶತಮಾನದಲ್ಲಿಯೇ ಬೆಂಗಳೂರು ಅಭಿವೃದ್ಧಿ’

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 16:25 IST
Last Updated 27 ಜೂನ್ 2025, 16:25 IST
ಬ್ಯಾಡಗಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಕೆಂಪೇಗೌಡರ ಜಯಂತಿ ಆಚರಿಸಲಾಯಿತು
ಬ್ಯಾಡಗಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಕೆಂಪೇಗೌಡರ ಜಯಂತಿ ಆಚರಿಸಲಾಯಿತು   

ಬ್ಯಾಡಗಿ: ನಾಡಪ್ರಭು ಕೆಂಪೇಗೌಡರು 16ನೇ ಶತಮಾನದಲ್ಲಿಯೇ ಬೆಂಗಳೂರು ನಗರವನ್ನು ಅಭಿವೃದ್ಧಿಪಡಿಸಿದವರು ಎಂದು ಶಿರಸ್ತೇದಾರ ನಾಯಕ ಹೇಳಿದರು.

ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೆಗೌಡರ 516ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೂರದೃಷ್ಟಿ ಹೊಂದಿದ್ದ ಕೆಂಪೇಗೌಡರು ಬೆಂಗಳೂರು ನಗರವನ್ನು ಸುಂದರವಾಗಿ ನಿರ್ಮಿಸಿ ರಾಜ್ಯದ ರಾಜಧಾನಿಯನ್ನಾಗಿ ಮಾಡುವ ಮೂಲಕ ಪ್ರಮುಖ ದೇಶದ ಪ್ರಮುಖ ನಗರಗಳ ಪಟ್ಟಿಗೆ ಸೇರಿಸಿದ್ದಾರೆ. ಅಂಥವರ ಸ್ಮರಣೆ ಬಹಳ ಒಳ್ಳೆಯ ಕೆಲಸ’ ಎಂದರು.

ADVERTISEMENT

ನಾಗರಾಜ ಗುಳೇದ ಹಾಗೂ ಕಚೇರಿ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.