ADVERTISEMENT

ಬ್ಯಾಡಗಿ ಮೆಣಸಿನಕಾಯಿ ಬೆಲೆಯಲ್ಲಿ ಸ್ಥಿರತೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2024, 15:45 IST
Last Updated 2 ಡಿಸೆಂಬರ್ 2024, 15:45 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬ್ಯಾಡಗಿ: ಇಲ್ಲಿಯ ಅಂತರರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಸೋಮವಾರ 24,135 ಚೀಲ (6,033 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿದೆ.

ಪ್ರಸಕ್ತ ಹಂಗಾಮು ಆರಂಭವಾಗಿದ್ದರೂ ಬೆಲೆಯಲ್ಲಿ ಏರಿಕೆ ಕಾಣದೆ, ಸೋಮವಾರ ವಹಿವಾಟು ಮಂದಗತಿಯಲ್ಲಿ ಸಾಗಿತ್ತು. ಮುಂಜಾನೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಾರುಕಟ್ಟೆಗೆ ಸೋಮವಾರ 3,675 ಲಾಟ್‌ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 315 ಲಾಟ್‌ಗಳಿಗೆ ವರ್ತಕರು ಟೆಂಡರ್ ನಮೂದಿಸಿಲ್ಲ.

ADVERTISEMENT

ಒಂದು ಚೀಲ ಡಬ್ಬಿ ಮೆಣಸಿನಕಾಯಿ ₹28,809ರಂತೆ, 7 ಚೀಲ ಕಡ್ಡಿ ಮೆಣಸಿನಕಾಯಿ ₹27,069ರಂತೆ ಮತ್ತು ಗುಂಟೂರು ತಳಿ ಮೆಣಸಿನಕಾಯಿ ₹16,509ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು, ಬ್ಯಾಡಗಿ ಡಬ್ಬಿ ₹23,259, ಬ್ಯಾಡಗಿ ಕಡ್ಡಿ ₹22,209 ಹಾಗೂ ಗುಂಟೂರ ತಳಿ ₹12,809ರಂತೆ ಮಾರಾಟವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.