ADVERTISEMENT

ನಾಡು– ನುಡಿ ವಿಚಾರದಲ್ಲಿ ರಾಜಿಯಿಲ್ಲ: ಸಚಿವ ಶಿವರಾಮ ಹೆಬ್ಬಾರ್‌

ರಾಷ್ಟ್ರ, ನಾಡ ಹಾಗೂ ಪರಿಷತ್ತಿನ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 7:16 IST
Last Updated 6 ಜನವರಿ 2023, 7:16 IST
ಹಾವೇರಿ ನಗರದ ಹೊರವಲಯದ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಮಂಭಾಗ ಶುಕ್ರವಾರ ರಾಷ್ಟ್ರ, ನಾಡ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಶಾಸಕ ನೆಹರು ಓಲೇಕಾರ, ಸಚಿವ ಸುನಿಲ್‌ಕುಮಾರ್‌, ಸಂಸದ ಶಿವಕುಮಾರ ಉದಾಸಿ, ಕಸಾಪ ಅಧ್ಯಕ್ಷ ಮಹೇಶ ಜೋಶಿ, ಮಾಜಿ ಸಚಿವ ಬಸವರಾಜ ಶಿವಣ್ಣನವರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ಇದ್ದಾರೆ   –ಪ್ರಜಾವಾಣಿ ಚಿತ್ರ 

ಹಾವೇರಿ: ಏಲಕ್ಕಿ ಕಂಪಿನ ನಗರಿ, ಸರ್ವ ಧರ್ಮಗಳ ಸಾಮರಸ್ಯದ ಬೀಡು ಹಾವೇರಿ ನಗರದ ಹೊರವಲಯದ ಸಮ್ಮೇಳನದ ವೇದಿಕೆ ಮುಂಭಾಗ ಶುಕ್ರವಾರ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡಲಾಯಿತು.

ಧರ್ನುಮಾಸದ ಚಳಿಯ ನಡುವೆ,‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣದ ಜಾಗದಲ್ಲಿ ಕನ್ನಡ ಗಂಧರ್ವ ಲೋಕ ಧರೆಗಿಳಿದಂತೆ ನಿರ್ಮಿಸಲಾಗಿರುವ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ ಮುಂಭಾಗದಲ್ಲಿ ಮುಂಜಾನೆ 7 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿತು.

ರಾಷ್ಟ್ರ ಧ್ವಜವನ್ನು ಜಿಲ್ಲಾ ಉಸ್ತವಾರಿ ಸಚಿವ ಅರೆಬೈಲು ಶಿವರಾಮ ಹೆಬ್ಬಾರ್‌, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ , ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಬಿ‌. ಹಿರೇಮಠ‌ ‌ನಾಡಧ್ವಜದ ಧ್ವಜಾರೋಹಣ ನೆರವೇರಿಸಿದರು.

ADVERTISEMENT

ನಂತರ ಸಚಿವ ಅರೆಬೈಲು ಶಿವರಾಮ ಹೆಬ್ಬಾರ್ ಮಾಧ್ಯಮವದರೊಂದಿಗಿ ಮಾತನಾಡಿ, ‘ಹಾವೇರಿ ಸಾಹಿತ್ಯ ಸಮ್ಮೇಳನವನ್ನು ಕನ್ನಡಿಗರು ಹಾಗೂ ಸಾಹಿತ್ಯ ಆಸಕ್ತರ ನೆನಪಿನಲ್ಲಿ ಉಳಿಯುವಂತೆ ಆಯೋಜಿಸಲಾಗಿದೆ. ಕನ್ನಡಿಗರ ಬಗ್ಗೆ, ಭಾಷೆ ಹಾಗೂ ನಾಡಿನ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವವರಿಗೆ ಸರಿಯಾದ ಉತ್ತರ ನೀಡಲಾಗುವುದು. ನಾಡು ನುಡಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆಯಿಲ್ಲ ಎಂದರು.

ಪೊಲೀಸ್, ಎನ್.ಸಿ.ಸಿ, ಸೇವದಾಳ, ಸ್ಕೌಟ್ ಮತ್ತು ಗೈಡ್ಸ್ ತಂಡಗಳು ಗೌರವ ವಂದನೆ ಸಲ್ಲಿಸಿದವು. ಹೇಮಂತ್ ಎಸ್.ಕೆ. ಸ್ವಾಗತಿಸಿದರು. ನಾಗರಜ ಇಚ್ಚಂಗಿ ನಿರೂಪಿಸಿದರು. ಎ.ಎಲ್.ಶೇಖಸುರನುಗಿ ವಂದಿಸಿದರು. ಅರುಣ್ ಕಾಳಪ್ಪನವರು ಕಾರ್ಯಕ್ರಮ ನಿರ್ವಹಿಸಿದರು.

ಸಂಸದ ಶಿವಕುಮಾರ ಉದಾಸಿ, ಶಾಸಕ ನೆಹರು ಓಲೆಕಾರ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿ.ಪಂ. ಸಿಇಒ ಮೊಹಮ್ಮದ್‌ ರೋಶನ್, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.