ADVERTISEMENT

ಧೂಮಪಾನ ಮಾಡಿದರೆ ದಂಡ ಹಾಕಿ: ಹಾವೇರಿ ಜಿಲ್ಲಾಧಿಕಾರಿ ಯೋಗೇಶ್ವರ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 12:32 IST
Last Updated 20 ಜುಲೈ 2021, 12:32 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು 
ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು    

ಹಾವೇರಿ: ‘ಸಾರ್ವಜನಿಕ ಸ್ಥಳ ಹಾಗೂ ಸಾರ್ವಜನಿಕ ಕಚೇರಿಗಳಲ್ಲಿ ಧೂಮಪಾನ ನಿಷೇಧಿಸಿ ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು. ಫಲಕ ಹಾಕದಿದ್ದರೆ ಸಂಬಂಧಿಸಿದವರಿಗೆ ₹100 ದಂಡ ವಿಧಿಸಿ’ ಎಂದು ಅನುಷ್ಠಾಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ‌

ಸಾರ್ವಜನಿಕ ಸ್ಥಳ, ಅಂಗಡಿ ಹಾಗೂ ಸಾರ್ವಜನಿಕ ಕಚೇರಿಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಕಡ್ಡಾಯವಾಗಿ ದಂಡ ವಿಧಿಸಿ ಎಂದು ಹೇಳಿದರು.

ADVERTISEMENT

ಶಾಲೆ, ಕಾಲೇಜು, ಸಾರ್ವಜನಿಕ ಕಚೇರಿಗಳ 100 ಮೀಟರ್‌ ಅಂತರದಲ್ಲಿ ಚಹಾ ಅಂಗಡಿಗಳಲ್ಲಿ ಬೀಡಿ, ಸಿಗರೇಟ್‌, ತಂಬಾಕು, ಗುಟ್ಕಾ ಮಾರಾಟ ಮಾಡದಂತೆ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.

ನಗರಸಭೆ, ಪುರಸಭೆಗಳಲ್ಲಿ ತಂಬಾಕು ದುಷ್ಪರಿಣಾಮ ಕುರಿತಂತೆ ಬೆಳಗಿನ ಕಸ ವಿಲೇವಾರಿ ವಾಹನ ಧ್ವನಿ ವರ್ಧಕದ ಮೂಲ ಜಿಂಗಲ್ ಹಾಗೂ ಆಡಿಯೊಗಳ ಮೂಲಕ ಜಾಗೃತಿ ಮೂಡಿಸಬೇಕು. ಆಹಾರ ಪದಾರ್ಥಗಳ ಜೊತೆಗೆ ತಂಬಾಕು ಮಿಶ್ರಣ ಮಾಡಿ ಮಾರಾಟ ಮಾಡದಂತೆ ಸೂಚನೆ ನೀಡಬೇಕು. ತಂಬಾಕು ದುಷ್ಪರಿಣಾಮ ಕುರಿತಂತೆ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಡಿವೈಎಸ್ಪಿ ಶಂಕರ ಮಾರಿಹಾಳ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಹಾಗೂ ತಂಬಾಕು ನಿಯಂತ್ರಣ ಅನುಷ್ಠಾನ ಅಧಿಕಾರಿ ಡಾ.ಜಗದೀಶ ಪಾಟೀಲ, ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.