ಕುಮಾರಪಟ್ಟಣ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮೀಪದ ಚಳಗೇರಿ ಟೋಲ್ ಬಳಿ ಸ್ಥಾಪಿಸಿರುವ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಚುನಾವಣಾ ಸಿಬ್ಬಂದಿ ಸುಡು ಬಿಸಿಲನ್ನು ಲೆಕ್ಕಿಸದೆ ನಿರಂತರವಾಗಿ ವಾಹನಗಳ ತಪಾಸಣೆ ನಡೆಸಿದರು.
ತೋಟಗಾರಿಕೆ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಜಗದೀಶ್ ಮಾತನಾಡಿ, ಬೆಂಗಳೂರು ಮಾರ್ಗದಿಂದ ರಾಣೆಬೆನ್ನೂರು ನಗರದ ಕಡೆ ಸಂಚರಿಸುವ ಎಟಿಎಂ ಹಣ ಸಾಗಿಸುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತದೆ. ಅನುಮತಿ ಇಲ್ಲದ ಕಂಟೈನರ್ ಗಳನ್ನು ಹೊರತುಪಡಿಸಿ ಉಳಿದೆಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುವುದು ಎಂದು ತಿಳಿಸಿದರು.
ಸರದಿಯಂತೆ ಮೂರು ತಂಡಗಳು ಕಾರ್ಯ ನಿರ್ವಹಿಸುತ್ತವೆ. ಈವರೆಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಮಧ್ಯಾಹ್ನದ ವೇಳೆಯಲ್ಲಿ ಬಿಸಿಲಿನ ತಾಪಕ್ಕೆ ಕಾಂಕ್ರೀಟ್ ರಸ್ತೆ ನಿಲ್ಲುವುದಕ್ಕೆ ಆಗುವುದಿಲ್ಲ. ಟೆಂಟ್ ಮುಂಭಾಗದಲ್ಲಿ ನೆರಳಿನ ವ್ಯವಸ್ಥೆ ಕಲ್ಪಿಸಿದ್ದರೆ ಸಿಬ್ಬಂದಿಗೆ ಅನುಕೂಲವಾಗುತ್ತಿತ್ತು ಎಂದರು.
ಶಿಕ್ಷಕ ಗಂಗಾಧರ, ಮುದೇನೂರು ಗ್ರಾ.ಪಂ ಕಾರ್ಯದರ್ಶಿ ಹನುಮಂತಪ್ಪ ಹರಿಹರ, ಬೆನಕನಕೊಂಡ ಗ್ರಾ.ಪಂ ಕಾರ್ಯದರ್ಶಿ ಶ್ರೀಧರ್, ಪೊಲೀಸ್ ಕಾನ್ ಸ್ಟೇಬಲ್ ಕರಿಯಪ್ಪ ಗಸ್ತೇರ, ಬಿ.ಎನ್.ಬಾರ್ಕಿ, ಪರಶುರಾಮ ಕೊಡ್ಲೇರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.