ಗುತ್ತಲ: ಹಾವೇರಿ ತಾಲ್ಲೂಕಿನ ನೀರಲಗಿ ಗ್ರಾಮದಲ್ಲಿ ಜ.12 ರಂದು ಭಾನುವಾರ ಮಧ್ಯಾಹ್ನ ಪುಟ್ಟರಾಜ ಗವಾಗಳವರ ಮೂರ್ತಿ ಅನಾವರಣ ಸಮಾರಂಭ ಮತ್ತು ಶಿರಹಟ್ಟಿ ಫಕೀರ ಸಿದ್ಧರಾಮ ಶ್ರೀಗಳ ತುಲಾಭಾರ ಕಾರ್ಯಕ್ರಮ ನಡೆಯಲಿದೆ.
ಪುಟ್ಟರಾಜ ಗವಾಯಿಗಳ ಭಾವಚಿತ್ರ ಮೆರವಣಿಗೆ, ಕುಂಭ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಪುಟ್ಟರಾಜ ಗವಾಯಿಗಳ ಮೂರ್ತಿ ಅನಾವರಣಗೊಳ್ಳಲಿದೆ. ಕಲ್ಮೇಶ್ವರ, ಮೈಲಾರಲಿಂಗೇಶ್ವರ, ದೇವಸ್ಥಾನದ ಕಳಸಾರೋಹಣ, ನಿಜಲಿಂಗ ಸ್ವಾಮೀಜಿ ಗದ್ದುಗೆ ಅನಾವರಣ, ಕರಕಿಕೊಪ್ಪ ಹನುಪ್ಪನ ಮೂರ್ತಿ ಮತ್ತು ಮೂರ್ತಿ ಪ್ರತಿಷ್ಠಾಪನೆ ಹಾಗೂ ಪುರಾಣ ಮಹಾಮಂಗಲ ನಡೆಯಲಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಶಿರಹಟ್ಟಿಯ ಫಕ್ಕೀರದಿಂಗಾಲೇಶ್ವರ ಸ್ವಾಮೀಜಿ ವಹಿಸಲಿದ್ದಾರೆ. ಗದುಗಿನ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜ ಮೂರ್ತಿ ಅನಾವರಣಗೊಳಿಸುವರು. ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ.
ಗದಗ, ಹೊಸರಿತ್ತಿ, ಚಿಕ್ಕಮಗಳೂರ, ಗುಡ್ಡದಾನ್ವೇರಿ, ತುಪ್ಪದಕುರಹಟ್ಟಿ, ನೀಲಗುಂದ ಸ್ವಾಮೀಜಿಗಳು ಕಾರ್ಯಕ್ರಮದ ನೇತೃತ್ವವನ್ನು ವಹಿಸಲಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮೂಲು, ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನರ ಸೇರಿದಂತೆ ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.