ADVERTISEMENT

ಪರೀಕ್ಷೆಗೆ 1,700 ಅಭ್ಯರ್ಥಿಗಳು ಹಾಜರು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 16:31 IST
Last Updated 4 ಅಕ್ಟೋಬರ್ 2020, 16:31 IST

ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಟಿಇಟಿ ‌(ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ) ಮೊದಲ ಪರೀಕ್ಷೆ 9 ಕೇಂದ್ರಗಳಲ್ಲಿ ಹಾಗೂ ದ್ವಿತೀಯ ಪತ್ರಿಕೆಯ ಪರೀಕ್ಷೆ 20 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆದವು.

ಮೊದಲ ಪತ್ರಿಕೆಯ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದ 2,097 ಅಭ್ಯರ್ಥಿಗಳ ಪೈಕಿ 1,700 ಅಭ್ಯರ್ಥಿಗಳು ಹಾಜರಾಗಿದ್ದು, 397 ಅಭ್ಯರ್ಥಿಗಳು ಗೈರಾಗಿದ್ದರು. ಎರಡನೇ ಪತ್ರಿಕೆಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ 5,201 ಅಭ್ಯರ್ಥಿಗಳ ಪೈಕಿ 4,548 ಅಭ್ಯರ್ಥಿಗಳು ಹಾಜರಾಗಿದ್ದು, 653 ಜನರು ಗೈರಾಗಿದ್ದಾರೆ‌ ಎಂದು ಹಾವೇರಿ ಡಿಡಿಪಿಐ ಅಂದಾನಪ್ಪ ವಡಗೇರಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT