
ಶಿಗ್ಗಾವಿ: ‘ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಬೆಳೆಯುವುದು ಮುಖ್ಯವಾಗಿದೆ, ನಾಡು, ನುಡಿ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಹೋರಾಡುವ ಮೂಲಕ ದೇಶಕ್ಕೆ ನಮ್ಮದೆಯಾದ ಕೊಡುಗೆ ನೀಡುವಂತಾಗಬೇಕು. ಅದರಿಂದ ಬದುಕು ಸಾರ್ಥಕವಾಗುತ್ತದೆ’ ಎಂದು ರಾಜ್ಯ ಗಡಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿಮನಮರದ ಹೇಳಿದರು.
ಪಟ್ಟಣದ ತಾಲೂಕು ಕಾರ್ಯದರ್ಶಿಕಚೇರಿ ಸಭಾಭವನದಲ್ಲಿ ಗುರುವಾರ ತಾಲ್ಲೂಕು ಆಡಳಿತ ವತಿಯಿಂದ ನಡೆದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಅಧ್ಯಕ್ಷೆ ವಹಿಸಿ ಮಾತನಾಡಿ, ‘ಕಿತ್ತೂರು ರಾಣಿ ಚನ್ನಮ್ಮ ಸಂಸ್ಥಾನ ಸೇರಿಂದ ನಾಡಿನ ಅನೇಕ ರಾಜ ಮನೆತನಗಳು ಬ್ರಿಟಿಷರ ವಿರುದ್ದ ಹೋರಾಡಿರುವುದನ್ನು ಇತಿಹಾಸದಲ್ಲಿ ಕಾಣುತ್ತೇವೆ. ಪ್ರತಿಯೊಬ್ಬರು ತಮ್ಮಲ್ಲಿನ ಆಂತರಿಕ ವೈಮನಸ್ಸು ಬಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದರು.
ಬಿಇಒ ಎಂ.ಬಿ.ಅಂಬಿಗೇರ, ಮುಖಂಡರಾದ ಶಿವಾನಂದ ಮ್ಯಾಗೇರಿ, ಪುರಸಭೆ ಸದಸ್ಯೆ ವಸಂತಾ ಬಾಗೂರ, ಪ್ರೇಮಾ ಪಾಟೀಲ ಮಾತನಾಡಿದರು.
ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಬಾಗೂರ, ವೀರೇಶ ಆಜೂರ, ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಯಡಪ್ಪನವರ, ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ, ಜಿಲ್ಲಾ ಕೆಎಂಎಫ್ ನಿದೇರ್ಶಕ ತಿಪ್ಪಣ್ಣ ಸಾತಣ್ಣವರ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅರುಣ ಹುಡೇದಗೌಡ್ರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಹರವಿ, ಮುಖಂಡರಾದ ರಮೇಶ ವನಹಳ್ಳಿ, ಮಾಲತೇಶ ಯಲಿಗಾರ, ಮಂಜುನಾಥ ಬ್ಯಾಹಟ್ಟಿ, ಶಂಕರಗೌಡ್ರ ಪಾಟೀಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸುತ್ತಲಿನ ಗ್ರಾಮಗಳು ಹಿರಿಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.