ರಟ್ಟೀಹಳ್ಳಿ: ತಾಲ್ಲೂಕಿನ ಅಣಜಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸನಗೌಡ ಪಾಟೀಲ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಾಲ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
‘ಗ್ರಾಮದ ಸ್ಮಶಾನ ಜಾಗದಲ್ಲಿ ಮನೆ ಕಟ್ಟಲು ಪ್ರಸ್ತಾವನೆ ಸಲ್ಲಿಕೆ, ಇ-ಸ್ವತ್ತು ನೀಡಲು ಲಂಚ ಪಡೆದ ಪ್ರಕರಣ ಸೇರಿದಂತೆ ವಿವಿಧ ಕರ್ತವ್ಯ ಲೋಪದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಅಣಜಿ ಗ್ರಾಮದ ಪಿಡಿಒ ಬಸನಗೌಡ ಪಾಟೀಲ ಅವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಾಲ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.