ಶಿಗ್ಗಾವಿ: ವಿವಿಧ ಯೋಜನೆಯನ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸಿಗಬೇಕಾದ ಸಕಲ ಸೌಲಭ್ಯಗಳನ್ನು ವಿತರಿಸಲಾಗಿದೆ. ಅದರಿಂದ ವೃದ್ಧ ಫಲಾನುಭವಿಗಳಿಗೆ ಅನುಕೂಲವಾಗಿದೆ ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕ್ಕಮ್ಮನವರ ಹೇಳಿದರು.
ತಾಲ್ಲೂಕಿನ ದುಂಢಸಿ ಗ್ರಾಮದಲ್ಲಿ ಬುಧವಾರ ಕಂದಾಯ ಇಲಾಖೆಯಿಂದ ನಡೆದ ಪಿಂಚಣಿ ಮುಕ್ತ ಗ್ರಾಮ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪಿಂಚಣಿ ಆದೇಶದ ಪ್ರತಿ ವಿತರಿಸಿ ಅವರು ಮಾತನಾಡಿದರು.
ವಿವಿಧ ಯೋಜನೆಯಡಿ ಫಲಾನುಭವಿಗಳು ಅರ್ಜಿ ಹಿಡಿದುಕೊಂಡು ಕಚೇರಿಗೆ ಅಲೆದಾಡುವುದನ್ನು ತಡೆಯಲು ಸರ್ಕಾರ ಈ ಅದಾಲತ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಗ್ರಾಮೀಣ ಪ್ರದೇಶದ ಜನರ ತೊಂದರೆ ತಡೆಯುವ ಉದ್ದೇಶ ನಮ್ಮದಾಗಿದೆ. ಇದರ ಪ್ರಯೋಜನ ಎಲ್ಲರಿಗೂ ತಲುಪಿಸುವ ಪ್ರಮಾಣಿಕ ಕಾರ್ಯ ಮಾಡಲಾಗುತ್ತಿದೆ ಎಂದರು.
ತಹಶೀಲ್ದಾರ್ ಮಂಜುನಾಥ ಮುನ್ನೊಳ್ಳಿ, ಉಪತಹಶೀಲ್ದಾರ್ ಬಸವರಾಜ ಹೊಂಕಳೆಪ್ಪನವರ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ,ಗ್ರಾಮ ಪಂಚಾಯ್ತಿ ಸದಸ್ಯರು, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.