ADVERTISEMENT

‘ವೈದ್ಯಕೀಯ ಕ್ಷೇತ್ರದಲ್ಲಿ ವಿಪುಲ ಉದ್ಯೋಗ’

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 14:09 IST
Last Updated 13 ಫೆಬ್ರುವರಿ 2021, 14:09 IST
ಹಾವೇರಿಯ ಅಶ್ವಿನಿ ನಗರದಲ್ಲಿ ಡಾ.ಸಂಜಯ ಡಾಂಗೆ ಇನ್‍ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮವನ್ನು ಡಾ.ಸಂಜಯ ಡಾಂಗೆ ದಂಪತಿ ನೆರವೇರಿಸಿದರು 
ಹಾವೇರಿಯ ಅಶ್ವಿನಿ ನಗರದಲ್ಲಿ ಡಾ.ಸಂಜಯ ಡಾಂಗೆ ಇನ್‍ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮವನ್ನು ಡಾ.ಸಂಜಯ ಡಾಂಗೆ ದಂಪತಿ ನೆರವೇರಿಸಿದರು    

ಹಾವೇರಿ: ಡಾಂಗೆ ನರ್ಸಿಂಗ್‌ ಹೋಮ್‌ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 25 ವರ್ಷ ಪೂರೈಸಿದೆ. ಈ ಬೆಳ್ಳಿಹಬ್ಬದ ಸವಿನೆನಪಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ ಕಲ್ಪಿಸುವ ದೃಷ್ಟಿಯಿಂದ ನಗರದಲ್ಲಿ ‘ಡಾ.ಸಂಜಯ ಡಾಂಗೆ ಇನ್‌ಸ್ಟಿಟ್ಯೂಟ್‌ ಆಫ್‌ ಪ್ಯಾರಾ ಮೆಡಿಕಲ್‌ ಸೈನ್ಸಸ್‌’ ಆರಂಭಿಸಲಾಗಿದೆ ಎಂದು ಕಾಲೇಜಿನ ಅಧ್ಯಕ್ಷ ಡಾ.ಸಂಜಯ ಡಾಂಗೆ ಹೇಳಿದರು.

ಅಶ್ವಿನಿ ನಗರದಲ್ಲಿ ಡಾ.ಸಂಜಯ ಡಾಂಗೆ ಇನ್‍ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್ ಕಾಲೇಜಿನ ಉದ್ಘಾಟನೆ ನೆರವೇರಿಸಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶಗಳಿವೆ. ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬೋರೇಟರಿ, ಡಿಪ್ಲೊಮಾ ಇನ್ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಆಪರೇಷನ್ ಥಿಯೇಟರ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ, ಡಿಪ್ಲೊಮಾ ಇನ್ ಡಯಾಲಿಸಿಸ್ ಟೆಕ್ನಾಲಜಿ ಕೋರ್ಸ್‌ಗಳನ್ನು ಆರಂಭಿಸಲಾಗಿದೆ. ಈ ಕೋರ್ಸ್‌ಗಳಿಂದ ಉದ್ಯೋಗ ಗಳಿಸಬಹುದು ಎಂದರು.

ADVERTISEMENT

ಸಂಸ್ಥೆಯ ಕಾರ್ಯದರ್ಶಿ ಡಾ.ಲಿಲತಾ ಸಂಜಯ ಡಾಂಗೆ ಮಾತನಾಡಿದರು.ಡಾ.ಅಣ್ಣಯ್ಯ ಚಾವಡಿ, ಉಪನ್ಯಾಸಕರಾದ ಎಸ್.ಬಿ. ಪಾಟೀಲ, ಶೀಲಾ ದಾಸರ, ಅಶ್ವಿನಿ ಜೈನ್, ಗಣೇಶ ಮಾಂಡ್ರೆ, ಪ್ರೊ.ಈಶಪ್ಪ ಗಾಣೀಗೇರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.