ADVERTISEMENT

ಅಪರಾಧಿಗೆ 12 ವರ್ಷ ಕಠಿಣ ಶಿಕ್ಷೆ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 15:49 IST
Last Updated 18 ಮಾರ್ಚ್ 2021, 15:49 IST
-
-   

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 12 ವರ್ಷಗಳ ಕಠಿಣ ಸಜೆ ಹಾಗೂ ₹8 ಸಾವಿರ ದಂಡ ವಿಧಿಸಿ ಗುರುವಾರ ಜಿಲ್ಲಾ ಸೆಷನ್ಸ್‌ ಎಫ್.ಟಿ.ಎಸ್.ಸಿ-1(ಪೊಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್. ಜ್ಯೋತಿಶ್ರೀ ಆದೇಶ ನೀಡಿದ್ದಾರೆ.

2018ರ ಜುಲೈನಲ್ಲಿ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಹಾನಗಲ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹಾನಗಲ್ ಸರ್ಕಲ್‌ ಇನ್‌ಸ್ಪೆಕ್ಟರ್‌ ಆರ್.ಎಚ್.ಕಟ್ಟಿಮನಿ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಆರೋಪ ರುಜುವಾತದ ಕಾರಣ ಅಪರಾಧಿಕಗೆ ಕಠಿಣ ಶಿಕ್ಷೆ ಮತ್ತು ಸಂತ್ರಸ್ತೆಗೆ ₹2 ಲಕ್ಷ ಪರಿಹಾರ ನೀಡಲು ನ್ಯಾಯಾಧೀಶರು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.