
ಪ್ರಜಾವಾಣಿ ವಾರ್ತೆ
ಲೈಂಗಿಕ ದೌರ್ಜನ್ಯ –ಪ್ರಾತಿನಿಧಿಕ ಚಿತ್ರ
ಗುತ್ತಲ: ಇಲ್ಲಿಯ 11 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಈ ಸಂಬಂಧ ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ತಂದೆ ಕರೆಯುತ್ತಿರುವುದಾಗಿ ಹೇಳಿ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ದೌರ್ಜನ್ಯ ಎಸಗಿರುವ ಬಗ್ಗೆ ಪೋಷಕರು ದೂರು ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಆರೋಪಿ ಸಹ ಗುತ್ತಲ ನಿವಾಸಿ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ. ಇದು ಬಾಲಕಿಗೆ ಸಂಬಂಧಪಟ್ಟ ಪ್ರಕರಣ. ಹೀಗಾಗಿ, ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸಲಾಗದು’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.