
ಪ್ರಜಾವಾಣಿ ವಾರ್ತೆ
ಸುಜಾತಾ ಪಾಟೀಲ
ಹಾವೇರಿ: ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಸುಜಾತಾ ಪಾಟೀಲ ಅವರನ್ನು ಕರ್ತವ್ಯ ಲೋಪದ ಕಾರಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಮಾಡಿದ್ದಾರೆ.
ಅಕ್ಟೋಬರ್‌ನಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ವಾಹನ ಬದಲಾವಣೆ ಮತ್ತು ತನಿಖೆಯಲ್ಲಿ ಲೋಪ ಎಸಗಿದ ಆರೋಪದ ಮೇಲೆ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ದಾವಣಗೆರೆ ಪೂರ್ವ ವಲಯ ಐಜಿಪಿ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.