ADVERTISEMENT

‘ಎಲ್ಲ ಮಕ್ಕಳಿಗೂ ಪೋಲಿಯೊ ಲಸಿಕೆ ಹಾಕಿಸಿ’

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 16:10 IST
Last Updated 15 ಡಿಸೆಂಬರ್ 2020, 16:10 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ಹಾವೇರಿ: 2021ರ ಜ.17 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ ಮೂಲಕ ‘ಪೋಲಿಯೊ ಮುಕ್ತ ಭಾರತ’ ವಿಜಯವನ್ನು ಮುಂದುವರಿಸಲು ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಕರೆ ನೀಡಿದರು.

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಾಗೂ ಕೋವಿಡ್-19 ಲಸಿಕಾ ಪರಿಚಯ ಕುರಿತಂತೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್ ಮಾತನಾಡಿ, ಆರೋಗ್ಯ ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ ಮಾತನಾಡಿ, ‘ನೆರೆಯ ಪಾಕಿಸ್ತಾನ ಮತ್ತು ಅಪಘಾನಿಸ್ತಾನದಲ್ಲಿ ಪೋಲಿಯೊ ಪ್ರಕರಣಗಳು ಇರುವುದರಿಂದ ನಮ್ಮ ದೇಶದಲ್ಲಿ ಸಹ ಪೋಲಿಯೊ ವಿರುದ್ಧ ನಿರಂತರವಾಗಿ ಕಣ್ಗಾವಲು ನಡೆದಿದೆ. ಸೂಕ್ತ ಕ್ರಿಯಾಯೋಜನೆ ತಯಾರಿಸಿಕೊಂಡು ಲಸಿಕಾ ಕಾರ್ಯಕ್ರಮದ ಯಶಸ್ವಿಗೆ ಕ್ರಮವಹಿಸಬೇಕು’ ಎಂದು ತಿಳಿಸಿದರು.

ಎಸ್.ಎಂ.ಒ. ಡಾ.ಸಿದ್ಧಲಿಂಗಯ್ಯ ಅವರು ಕೋವಿಡ್ ಲಸಿಕೆ ಕಾರ್ಯಕ್ರಮ ಕುರಿತಂತೆ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.