ADVERTISEMENT

ಶಾರ್ಟ್ ಸರ್ಕಿಟ್‌: ಮನೆ, ಅಂಗಡಿ ಭಸ್ಮ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 13:38 IST
Last Updated 15 ಫೆಬ್ರುವರಿ 2021, 13:38 IST
ಕೂಸನೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಹಾಗೂ ಕುಶನ್ ಅಂಗಡಿಗೆ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ
ಕೂಸನೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಹಾಗೂ ಕುಶನ್ ಅಂಗಡಿಗೆ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ   

ಅಕ್ಕಿಆಲೂರ: ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಹಾಗೂ ಕುಶನ್ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಹಾನಗಲ್ ತಾಲ್ಲೂಕಿನ ಕೂಸನೂರು ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ದೂದಿಹಳ್ಳಿ ಹಾಗೂ ಚಂದ್ರಪ್ಪ ದೂದಿಹಳ್ಳಿ ಸಹೋದರರಿಗೆ ಸೇರಿದ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು, ಮನೆಯ ಚಾವಣಿ ಹಾಗೂ ವಸ್ತುಗಳು ಸುಟ್ಟಿವೆ.

ಮನೆಯ ಪಕ್ಕದ ಕುಶನ್ ಅಂಗಡಿಯೂ ಭಸ್ಮವಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಮನೆಯಲ್ಲಿದ್ದವರೆಲ್ಲ ಹೊರಗೆ ಓಡಿ ಬಂದಿದ್ದಾರೆ. ಹಾನಗಲ್‍ನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.