ADVERTISEMENT

3ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಿದ್ಧತೆ

15ರಿಂದ 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕಾಕರಣಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 13:52 IST
Last Updated 3 ಜನವರಿ 2022, 13:52 IST
ಹಾವೇರಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ 15 ರಿಂದ 18 ವರ್ಷದೊಳಗಿನ ಶಾಲಾ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಚಾಲನೆ ನೀಡಿದರು. ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಇದ್ದಾರೆ 
ಹಾವೇರಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ 15 ರಿಂದ 18 ವರ್ಷದೊಳಗಿನ ಶಾಲಾ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಚಾಲನೆ ನೀಡಿದರು. ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಇದ್ದಾರೆ    

ಹಾವೇರಿ: ‘ಕೋವಿಡ್-19 ಮೂರನೆ ಅಲೆ ಎದುರಿಸಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಸೋಮವಾರ 15 ರಿಂದ 18 ವರ್ಷದೊಳಗಿನ ಶಾಲಾ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 77,677 ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಯಾವುದೇ ಭಯವಿಲ್ಲದೆ ಲಸಿಕೆ ಪಡೆದುಕೊಳ್ಳಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಲಸಿಕೆ ನೀಡಲಾಗುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಲಸಿಕೆ ನೀಡುವ ವ್ಯವಸ್ಥೆಯಾಗಬೇಕು ಎಂದು ಹೇಳಿದರು.

ADVERTISEMENT

ಎರಡನೇ ಅಲೆಯಲ್ಲಿ ಹೋಂ ಕ್ವಾರಂಟೈನ್‌ಗೆ ಅವಕಾಶ ನೀಡಲಾಯಿತು. ವೈದ್ಯರ ಚೀಟಿಗಳಿಲ್ಲದೆ ಔಷಧ ಅಂಗಡಿಗಳಲ್ಲಿ ಮಾತ್ರೆಗಳನ್ನು ನೀಡಲಾಯಿತು. ಜನರು ಕೊರೊನಾ ಬಗ್ಗೆ ನಿರ್ಲಕ್ಷ್ಯ ತೋರಿ, ಉಸಿರಾಟದ ತೊಂದರೆಯಾದಾಗ ಆಸ್ಪತ್ರೆಗಳಿಗೆ ಬಂದರು. ಈ ಎಲ್ಲ ಕಾರಣಗಳಿಂದ ಜಿಲ್ಲೆಯಲ್ಲಿ 650 ಜನರು ಕೋವಿಡ್‌ನಿಂದ ಮೃತಪಟ್ಟರು ಎಂದು ಹೇಳಿದರು.

ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ 11.79 ಲಕ್ಷ ಜನರಿಗೆ ಲಸಿಕೆ ಹಾಕುವ ಗುರಿ ಹಾಕಿಕೊಂಡು 11,31,036 (ಶೇ 96)ಜನರಿಗೆ ಹಾಗೂ 8,66,855 (ಶೇ 74)ಜನರಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ 2,13,380 ಡೋಸ್ ಕೋವಿಶೀಲ್ಡ್‌ ಹಾಗೂ 97,250 ಡೋಸ್ ಕೋವ್ಯಾಕ್ಸಿನ್ ಸೇರಿ 3,10,630 ಡೋಸ್ ಲಸಿಕೆ ದಾಸ್ತಾನು ಲಭ್ಯವಿದೆ ಎಂದರು.

ಶಾಸಕ ನೆಹರು ಓಲೇಕಾರ ಮಾತನಾಡಿದರು. ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಜಯಾನಂದ ಪ್ರಾಸ್ತಾವಿಕ ನುಡಿಗಳನ್ನಾಡಿದರು.ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.