ADVERTISEMENT

ರಾಣೆಬೆನ್ನೂರು: ಹುಬ್ಬಳ್ಳಿ ಮರ್ಯಾದಗೇಡು ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 3:51 IST
Last Updated 27 ಡಿಸೆಂಬರ್ 2025, 3:51 IST
ರಾಣೆಬೆನ್ನೂರಿನಲ್ಲಿ ಎಸ್‌ಎಫ್‌ಐ ತಾಲ್ಲೂಕು ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು  
ರಾಣೆಬೆನ್ನೂರಿನಲ್ಲಿ ಎಸ್‌ಎಫ್‌ಐ ತಾಲ್ಲೂಕು ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು     

ರಾಣೆಬೆನ್ನೂರು: ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಗರ್ಭಿಣಿ ಮಾನ್ಯ ಪಾಟೀಲ ಮರ್ಯಾದೆಗೇಡು ಹತ್ಯೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಎಸ್‌ಎಫ್‌ಐ ತಾಲ್ಲೂಕು ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಶುಕ್ರವಾರ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಎಸ್‌ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಎಸ್‌., ಮಾತನಾಡಿ, ‘ಮರ್ಯಾದಾ ಹತ್ಯೆ ಪಿಡುಗನ್ನು ಬುಡ ಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿ ಹಾಗೂ ಅವರ ಕುಟುಂಬದ ಮೇಲೆ ನಡೆಯುವ ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು ತಡೆಯಬೇಕು’ ಎಂದರು.

‘ಪ್ರೀತಿಸಿ ಮದುವೆಯಾದ ಕಾರಣಕ್ಕೆ ಮಗಳನ್ನೇ ಕೊಂದಿರುವ ಘಟನೆಯನ್ನು ಮಾನವೀಯ ನಾಗರೀಕ ಸಮಾಜ ಸಹಿಸುವುದಿಲ್ಲ. ಮಹಿಳೆಯರ ಮೇಲಾಗುವ ಎಲ್ಲ ತರಹದ ದೌರ್ಜನ್ಯ ತಡೆಗಟ್ಟಲು ನ್ಯಾಯಮೂರ್ತಿ ಜಿ.ಎಸ್ ವರ್ಮಾ ಸಮಿತಿಯ ಹಾಗೂ ಉಗ್ರಪ್ಪ ಸಮಿತಿಯ ಮಹಿಳಾ ಪರ ಕಾನೂನು ಶಿಫಾರಸುಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಎಸ್ಎಫ್ಐ ಮಾಜಿ ಅಧ್ಯಕ್ಷ ಶ್ರೀಧರ ಚಲವಾದಿ ಮಾತನಾಡಿ, ‘ಬಸವಣ್ಣನವರು ಅಂತರ್ಜಾಜಾತಿ ವಿವಾಹ ಮಾಡಿ ಜಾತೀಯತೆ  ಹೋಗಲಾಡಿಸಲು ಅಡಿಪಾಯ ಹಾಕಿದ್ದರು. ಇಂದಿಗೂ ಮೇಲ್ಜಾತಿಯವರ ಅಟ್ಟಹಾಸ, ಜಾತಿ ತಾರತಮ್ಯ, ಜಾತಿ ದ್ವೇಷ, ಅಸ್ಪೃಷ್ಯತೆ, ದಲಿತರನ್ನು ಒಪ್ಪಿಕೊಳ್ಳಲಾಗದಂತ ಮನಸ್ಥಿತಿ ಆಳವಾಗಿದೆ ಎಂಬುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ
ಎಂದರು.

ಮೃತಳ ಪತಿ ವಿವೇಕಾನಂದ ದೊಡ್ಡಮನಿ ಹಾಗೂ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಸವರಾಜ ಸಾವಕ್ಕನವರ, ಗುಡ್ಡಪ್ಪ ಮಡಿವಾಳರ, ಹರೀಶ್ ನಾಯಕ, ಯೋಗೆಶ್ ಗೌಡ್ರ, ನಾಗರಾಜ ಸಿ.ಎಲ್, ಮದನ್ ಹರಿಜನ, ರಾಹುಲ್ ಎಸ್.ಎಲ್, ಚೇತನ್ ಎಸ್.ಯು, ದರ್ಶನ ಚಕ್ರಸಾಲಿ, ಮನೋಜ ಆರೇರ, ಚನ್ನವೀರಯ್ಯ, ನವೀನ ಬೆತ್ತೂರ, ಶಂಕರಗೌಡ ಪೋಲಿಸಗೌಡ್ರು, ಬೀರಪ್ಪ ಎಚ್, ಹನುಮಂತ ದುಗ್ಗತ್ತಿ, ಶಬ್ಬಿರ್, ಕರಬಸಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.