ADVERTISEMENT

ಬಂದ್‌: ಕಾರ್ಮಿಕರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2019, 15:23 IST
Last Updated 7 ಜನವರಿ 2019, 15:23 IST

ಹಾವೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಜ.8 ಮತ್ತು 9ರ ‘ಭಾರತ ಬಂದ್‌’ಗೆ ಜಿಲ್ಲೆಯಲ್ಲೂ ಬೆಂಬಲ ವ್ಯಕ್ತವಾಗಿದೆ. ಆದರೆ, ಶಾಂತಿಯುತವಾಗಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ನೀಡಲಾಗುವುದು ಎಂದು ಜಿಲ್ಲೆಯ ಸಂಘಟನೆಗಳು ಸ್ಪಷ್ಟಪಡಿಸಿವೆ.

ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ನಿಯೋಜನೆ, ಗಸ್ತು ಸೇರಿದಂತೆ ಭದ್ರತಾ ವ್ಯವಸ್ಥೆ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ. ಎಲ್ಲ ತಾಲ್ಲೂಕಿನಲ್ಲೂ ಕಂದಾಯ ಇಲಾಖಾ ಮುಖ್ಯಸ್ಥರು ನಿಗಾ ವಹಿಸಲು ಸೂಚನೆ ನೀಡಲಾಗಿದೆ. ಸಂಘಟನೆಗಳ ಜೊತೆಯೂ ಮಾತುಕತೆ ನಡೆಸಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಭರವಸೆ ನೀಡಿದ್ದಾರೆ. ಶಾಲಾ– ಕಾಲೇಜುಗಳು, ಸರ್ಕಾರಿ ಕಚೇರಿಗಳಿಗೆ ರಜೆ ನೀಡಿಲ್ಲ. ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ತಿಳಿಸಿದರು.

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕಾರ್ಮಿಕ ವಿರೋಧಿ ನೀತಿಗಳನ್ನು ಕೈ ಬಿಡುವಂತೆ ಆಗ್ರಹಿಸಿ ಜ.8 ಮತ್ತು 9ರಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ವಿನಾಯಕ ಕುರುಬರ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.