ADVERTISEMENT

ಹಾವೇರಿ: ಜಿಲ್ಲೆಯ ವಿವಿಧೆಡೆ ಮಳೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 15:49 IST
Last Updated 6 ಡಿಸೆಂಬರ್ 2018, 15:49 IST
ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಗುರುವಾರ ಮಳೆ ಸುರಿಯಿತು–ಪ್ರಜಾವಾಣಿ ಚಿತ್ರ: ನಾಗೇಶ ಬಾರ್ಕಿ
ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಗುರುವಾರ ಮಳೆ ಸುರಿಯಿತು–ಪ್ರಜಾವಾಣಿ ಚಿತ್ರ: ನಾಗೇಶ ಬಾರ್ಕಿ   

ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದ ಆಸುಪಾಸು ಹಾಗೂ ರಟ್ಟೀಹಳ್ಳಿ ತಾಲ್ಲೂಕಿನ ವಿವಿಧೆಡೆ ಗುರುವಾರ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಚದುರಿದಂತೆ ಅಲ್ಲಲ್ಲಿ ಮಳೆ ಸುರಿದಿದ್ದು, ನಗರದ ಕೆಲವೆಡೆ ತುಂತುರು ಹನಿಯೂ ಸುರಿದಿಲ್ಲ. ಆದರೆ, ಮೋಡ ಕವಿದ ವಾತಾವರಣ ಇತ್ತು.

ಉಳಿದಂತೆ ಜಿಲ್ಲೆಯ ಹಾನಗಲ್‌, ಹಿರೇಕೆರೂರ ತಾಲ್ಲೂಕುಗಳಲ್ಲಿ ಹಾಗೂ ಬಂಕಾಪುರ, ಬರಗೂರ, ಕುರುಬರ ಮಲ್ಲೂರು ವ್ಯಾಪ್ತಿಯಲ್ಲಿ ತುಂತುರು ಮಳೆಯಾಗಿದೆ. ಶಿಗ್ಗಾವಿ, ಬ್ಯಾಡಗಿ, ರಾಣೆಬೆನ್ನೂರು, ಸವಣೂರ ತಾಲ್ಲೂಕುಗಳಲ್ಲಿ ಮೋಡ ಕವಿದ ವಾತಾವರಣ ಇತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.