
ರಾಣೆಬೆನ್ನೂರು: ‘ಪರಿಶುದ್ದ ಹೃದಯ, ಧರ್ಮದ ನಿಜವಾದ ಅರ್ಥವನ್ನು ಲೋಕಕ್ಕೆ ತೋರಿಸಿದ ರಾಧಾಕೃಷ್ಣ ಪರಮಹಂಸರ ನಿಜವಾದ ಅವತಾರ ಪುರುಷರು’ ಎಂದು ಬೆಳಗಾವಿ ನಿಡಸೋಸಿ ದುರದುಂಡೀಶ್ವರ ಸಿದ್ದಸಂಸ್ಥಾನಮಠದ ನಿಜಲಿಂಗೇಶ್ವರ ಸ್ವಾಮೀಜಿ ಹೇಳಿದರು.
ಇಲ್ಲಿನ ವಿನಾಯಕ ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ರಾಮಕೃಷ್ಣರ ಜಯಂತಿ ನಿಮಿತ್ತ ಗುರುವಾರ ಹಮ್ಮಿಕೊಂಡಿದ್ದ ವಿಶೇಷ ಸತ್ಸಂಗ ಹಾಗೂ ರಾಮಕೃಷ್ಣ ವಿವೇಕಾನಂದ ಸಂಕಥನ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಲೇಖಕ ಗುರುಪಾದ ಮರಿಗುದ್ದಿ ಅವರು ರಚಿಸಿದ ಶ್ರೀರಾಮಕೃಷ್ಣ ವಿವೇಕಾನಂದ ಸಂಕಥನ ಗ್ರಂಥವನ್ನು ಮಾಜಿ ಶಾಸಕ ಡಿ.ಆರ್. ಪಾಟೀಲ ಲೋಕಾರ್ಪಣೆಗೊಳಿಸಿದರು.
ಹೊಸಪೇಟೆ ರಾಮಕೃಷ್ಣ ಗೀತಾಶ್ರಮದ ಅಧ್ಯಕ್ಷ ಸ್ವಾಮಿ ಸುಮೇಧಾನಂದಜಿ ಮಹಾರಾಜ್ ಮಾತನಾಡಿದರು. ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಪ್ರಕಾಶಾನಂದಜಿ ಮಹಾರಾಜ್ ಅಧ್ಯಕ್ಷತೆ ವಹಿಸಿದರು.
ಡಾ.ಚಂದ್ರಶೇಖರ ಕೇಲಗಾರ, ಲೇಖಕ ಗುರುಪಾದ ಮರಿಗುದ್ದಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಂಗಳಗೌರಿ ಪೂಜಾರ, ಗಡ್ಡೆಪ್ಪ ಗುಂಜಟಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.