ADVERTISEMENT

ರಾಣೆಬೆನ್ನೂರು: ವಿದ್ಯುತ್‌ ಕಂಬಕ್ಕೆ ಕಟ್ಟಿ ಮಹಿಳೆಗೆ ಥಳಿತ

​ಪ್ರಜಾವಾಣಿ ವಾರ್ತೆ
Published 3 ಮೇ 2024, 19:02 IST
Last Updated 3 ಮೇ 2024, 19:02 IST
   

ರಾಣೆಬೆನ್ನೂರು: ಬೆಳಗಾವಿ ಜಿಲ್ಲೆಯ ವಂಟಮೂರಿ ಪ್ರಕರಣ ಮಾಸುವ ಮುನ್ನವೇ, ತಾಲ್ಲೂಕಿನ ಅರೆಮಲ್ಲಾಪುರದಲ್ಲಿ 50 ವರ್ಷದ ಮಹಿಳೆಯನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ನಾಲ್ಕು ದಿನಗಳ ಹಿಂದೆ ನಡೆದಿದೆ.

‘ಹಲ್ಲೆಗೆ ಒಳಗಾದ ಮಹಿಳೆಯ ಪುತ್ರ ಅದೇ ಗ್ರಾಮದ ಯುವತಿಯನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಕೆಲ ದಿನಗಳ ಹಿಂದೆ ಇಬ್ಬರೂ ಮನೆ ಬಿಟ್ಟು ಹೋಗಿದ್ದರು. ಯುವತಿಯ ಸಂಬಂಧಿಕರು ಕುಪಿತಗೊಂಡು ಯುವಕನ ತಾಯಿಯನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಆಕೆಯನ್ನು ಸಾರ್ವಜನಿಕ ಆಸ್ಪತೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಯುವತಿಯ ಸಂಬಂಧಿಕರ ವಿರುದ್ಧ ದೂರು ದಾಖಲಿಸಿಕೊಂಡು, ಕ್ರಮ ಜರುಗಿಸಲಾಗಿದೆ ’ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಗ್ರಾಮದಲ್ಲಿ ಬಂದೋಬಸ್ತ್‌ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.