ADVERTISEMENT

ವಿದ್ಯುತ್ ದರ ಹೆಚ್ಚಳ ಖಂಡಿಸಿ ರಾಣೆಬೆನ್ನೂರ ಬಂದ್‌

​ಪ್ರಜಾವಾಣಿ ವಾರ್ತೆ
Published 20 ಜೂನ್ 2023, 15:29 IST
Last Updated 20 ಜೂನ್ 2023, 15:29 IST
   

ರಾಣೆಬೆನ್ನೂರು: ವಿದ್ಯುತ್‌ ದರ ಹೆಚ್ಚಳ ವಿರೋಧಿಸಿ ಜೂನ್‌ 22ರಂದು ರಾಣೆಬೆನ್ನೂರ ಬಂದ್‌ಗೆ ಕರೆ ನೀಡಲಾಗಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ಜಿ.ಜಿ. ಹೊಟ್ಟೆಗೌಡ್ರ ಹೇಳಿದರು.

ಇಲ್ಲಿನ ಸ್ಟೇಷನ್ ರಸ್ತೆಯ ವರ್ತಕರ ಸಂಘದ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೆಇಆರ್‌ಸಿ ಅವರು ಅಧಿಕ ಪ್ರಮಾಣದಲ್ಲಿ ವಿದ್ಯುತ್ ದರ ಏರಿಸಿ ಆದೇಶ ಹೊರಡಿಸಿದ್ದು, ಇದರಿಂದ ಗ್ರಾಹಕರು ಅನೇಕ ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದರು.

ಅಂದು ಬೆಳಗ್ಗೆ 10.30ಕ್ಕೆ ಪ್ರತಿಭಟನಾ ಮೆರವಣಿಗೆಯು ಇಲ್ಲಿನ ಎಪಿಎಂಸಿ ಮಾರುಕಟ್ಟೆಯ ಗಣಪತಿ ದೇವಸ್ಥಾನದಿಂದ ಹೊರಟು ಅಂಚೆ ವೃತ್ತ, ಎಂಜಿ ರಸ್ತೆ, ಕುರಬಗೇರಿ ಕ್ರಾಸ್, ಪಿಬಿ ರಸ್ತೆ ಮೂಲಕ ಮಿನಿವಿಧಾನ ಸೌಧಕ್ಕೆ ತೆರಳಿ ತಹಶೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ನಂತರ ಪ್ರತಿಭಟನಾ ಮೆರವಣಿಗೆ ಹೆಸ್ಕಾಂ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ADVERTISEMENT

ಪ್ರಥಮವಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ನಮ್ಮ ಮನವಿ ಮನ್ನಿಸಿ ವಿದ್ಯುತ್ ದರ ಏರಿಸಿರುವ ಆದೇಶ ತಕ್ಷಣ ವಾಪಸ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಮಾನಗಳಲ್ಲಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾಗುವುದು ಎಂದು ಎಚ್ಚರಿಸಿದರು.

ವರ್ತಕ ವಿ.ಪಿ. ಲಿಂಗನಗೌಡ್ರ, ಮಲ್ಲಿಕಾರ್ಜುನ ಅರಳಿ, ರತ್ನಾಕರ ಕುಂದಾಪುರ, ಸುಜಿತ ಜಂಬಗಿ, ಎಂ.ಆರ್. ಗಿರಡ್ಡಿ ಸೇರಿದಂತೆ ಹೊಟೆಲ್, ಬಂಗಾರದ ಅಂಗಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.