ರಾಣೆಬೆನ್ನೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿವೈಡರ್‌ಗೆ ಗುದ್ದಿದ ಪರಿಣಾಮವಾಗಿ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಕೋರ್ಟ್ ಸಮೀಪ ಭಾನುವಾರ ಸಂಜೆ ನಡೆದಿದೆ.
ಗಾಯಾಳುಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಸಂಜೆಯಾದರೂ ಇನ್ನು ಪ್ರಕರಣ ದಾಖಲಾಗಿಲ್ಲ. ಹಾವೇರಿ ಘಟಕಕ್ಕೆ ಸೇರಿದ ಬಸ್ ರಾಣೆಬೆನ್ನೂರಿನಿಂದ ಹಾವೇರಿಗೆ ತೆರಳುತ್ತಿತ್ತು ಎಂದು ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.