ರಾಣೆಬೆನ್ನೂರು: ತಾಲ್ಲೂಕಿನ ದೇವರಗುಡ್ಡದ ಮಾಲತೇಶಸ್ವಾಮಿ ದೇವರ ದೇವಸ್ಥಾನದ ದರ್ಶನಕ್ಕೆ ಆಗಮಿಸಿದ್ದ ಭಕ್ತರೊಬ್ಬರು ಕಳೆದುಕೊಂಡಿದ್ದ ಬ್ಯಾಗ್ ಅನ್ನು ಗೃಹರಕ್ಷಕ ದಳದ ಸಿಬ್ಬಂದಿ ಪತ್ತೆ ಹಚ್ಚಿ, ವಾರಸುದಾರರಿಗೆ ಮರಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಮೈಲಾರೆಪ್ಪ ಶೆಟ್ಟಿ ಎಂಬುವರು ₹10,000 ನಗದು, ಮೂರು ಮೊಬೈಲ್ ಫೋನ್‌ಗಳಿದ್ದ ಬ್ಯಾಗ್ ಅನ್ನು ಕಳೆದುಕೊಂಡಿದ್ದರು. ಈ ವಿಷಯವನ್ನು ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಮಿತ್ರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಕೆ.ಎಚ್.ಕನ್ನಜ್ಜನವರ ಹಾಗೂ ಜಿ.ಎನ್.ಚೆನ್ನಾಪುರ ಅವರಿಗೆ ತಿಳಿಸಿದ್ದರು. ಸಿಬ್ಬಂದಿ ಬ್ಯಾಗ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರಿಸಿದರು.
ಸಿಬ್ಬಂದಿಯ ಕರ್ತವ್ಯ ನಿಷ್ಠೆಗೆ ದೇವರಗುಡ್ಡ ಮಾಲತೇಶ ದೇವಸ್ಥಾನ ಕಮೀಟಿ ಪದಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಪ್ರಶಂಸೆ ವ್ಯಕ್ತಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.