ADVERTISEMENT

ರಾಣೆಬೆನ್ನೂರು | SSLC ಪರೀಕ್ಷೆ ನೋಂದಣಿಗೆ ಕ್ರಮವಹಿಸಿ: ಶಿಕ್ಷಣಾಧಿಕಾರಿ ಮೀರಾ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 4:19 IST
Last Updated 16 ಅಕ್ಟೋಬರ್ 2025, 4:19 IST
ರಾಣೆಬೆನ್ನೂರಿನ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದಲ್ಲಿ ಬುಧವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಧಾರಣೆ ಕಾರ್ಯಾಗಾರವನ್ನು ಗಣ್ಯರು ಉದ್ಘಾಟಿಸಿದರು 
ರಾಣೆಬೆನ್ನೂರಿನ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದಲ್ಲಿ ಬುಧವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಧಾರಣೆ ಕಾರ್ಯಾಗಾರವನ್ನು ಗಣ್ಯರು ಉದ್ಘಾಟಿಸಿದರು    

ರಾಣೆಬೆನ್ನೂರು: ‘2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವಂತೆ ಮುಖ್ಯ ಶಿಕ್ಷಕರು ಕ್ರಮ ವಹಿಸಬೇಕು’ ಜಿಲ್ಲಾ ಉಪನಿರ್ದೇಶಕರ ಕಚೇರಿ ಶಿಕ್ಷಣಾಧಿಕಾರಿ ಮೀರಾ ಹೇಳಿದರು.

ನಗರದ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದಲ್ಲಿ ಬುಧವಾರ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ವಿಶ್ಲೇಷಣೆ ಹಾಗೂ ಕ್ರಿಯಾ ಯೋಜನೆ  ಕಾರ್ಯಾಗಾರದಲ್ಲಿ ಮಾತನಾಡಿದರು.

ಪರೀಕ್ಷೆ ನೋಂದಣಿಗೆ ಅಗತ್ಯವಿರುವ ಮಾಹಿತಿ ಸಂಗ್ರಹಿಸಿ, ನಿಗದಿಪಡಿಸಿದ ಅವಧಿಯೊಳಗೆ ಸಲ್ಲಿಸಬೇಕು. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಹೆಚ್ಚಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿರುವ ಕ್ರಮಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು’ ಎಂದರು.

ADVERTISEMENT

ರಾಣೆಬೆನ್ನೂರು ಬಿಎಒ ಶಾಮಸುಂದರ ಅಡಿಗ, ಹಿರೇಕೆರೂರು ಬಿಇಒ ಎನ್‌. ಶ್ರೀಧರ್‌, ಬ್ಯಾಡಗಿ ಬಿಇಒ ಎಸ್‌.ಜಿ. ಕೋಟಿ ಮಾತನಾಡಿದರು. 

ವಿಜ್ಞಾನ ವಿಷಯ ಪರಿವೀಕ್ಷಕ ಸುರೇಶ ಮೂಡಲ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಪ್ರಭಾಕರ ಚಿಂದಿ, ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಯಕ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಎಚ್‌.ಎಚ್‌. ಜಾಡರ ಮತ್ತು ಸಿ.ವಿ. ಅಡಿವೇರ, ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ ಚಲವಾದಿ, ಅನುದಾನಿತ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರ, ಬೆನಕನಕೊಂಡ ಮುಖ್ಯ ಶಿಕ್ಷಕ ಆರ್‌. ಮಂಜಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.