ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಯಲಿವಾಳ ಗ್ರಾಮದ ಇಮಾಮಸಾಬ್ಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಿರಣಿ ಕಿಣಿ ಜೀವಾವಧಿ ಶಿಕ್ಷೆ ಮತ್ತು ₹ 20 ಸಾವಿರ ದಂಡ ವಿಧಿಸಿದ್ದಾರೆ.
ಶಿಗ್ಗಾವಿ ತಾಲ್ಲೂಕು ತಡಸ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿ ತನ್ನ ಅಣ್ಣನೊಂದಿಗೆ ಅಗಡಿ ತೋಟಕ್ಕೆ ಗೋಡಂಬಿ ಹಣ್ಣು ಬಿಡಿಸಲು ಹೋದಾಗ ಕೂಲಿ ಕಾರ್ಮಿಕ ಯಲಿವಾಳ ಗ್ರಾಮದ ಇಮಾಮಸಾಬ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಶಿಗ್ಗಾವಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪೋಕ್ಸೋ ಕಾಯ್ದೆಯಡಿ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ. ದಂಡದ ಹಣದಲ್ಲಿ ₹ 10 ಸಾವಿರವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸಿದ್ಧಾರೂಢ ಎಂ.ಗೆಜ್ಜಿಹಳ್ಳಿ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.