ADVERTISEMENT

ಲೈಂಗಿಕ ದೌರ್ಜನ್ಯ: ಆರೋಪಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 15:52 IST
Last Updated 3 ಡಿಸೆಂಬರ್ 2019, 15:52 IST

ಹಾವೇರಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿ ನಾಗಪ್ಪ ಶಿವಪ್ಪ ಮೂಲಿಕೇರಿಗೆ ಒಂದನೇ ಅಧಿಕ ಜಿಲ್ಲಾ ಹಾಗೂ ಸೆಷನ್ಸ್‌ (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ ಕಿಣಿ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.

ಬ್ಯಾಡಗಿ ತಾಲ್ಲೂಕು ಬೆಳಕೇರಿ ಗ್ರಾಮದ ಆರೋಪಿ ನಾಗಪ್ಪ ಶಿವಪ್ಪ ಮೂಲಿಕೇರಿ, ಮಾನಸಿಕ ಹಾಗೂ ಶಾರೀರಿಕವಾಗಿ ದುರ್ಬಲವಾದ ಬಾಲಕಿ ಮೇಲೆ 2018ರ ಫೆಬ್ರುವರಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಆತನ ವಿರುದ್ಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ಚಿದಾನಂದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಆರೋಪ ಸಾಬೀತಾದ ಕಾರಣ ಕಲಂ 4 ಹಾಗೂ 6 ಪೋಕ್ಸೊ ಕಾಯ್ದೆಯಡಿ ಶಿಕ್ಷೆವಿಧಿಸಲಾಗಿದೆ. ಈ ಮೊತ್ತದಲ್ಲಿ ಸಂತ್ರಸ್ತೆಗೆ ₹ 20 ಸಾವಿರ ನೀಡಲು ತೀರ್ಪಿನಲ್ಲಿ ಆದೇಶಿಸಲಾಗಿದೆ. ಪೋಕ್ಸೊ ವಿಶೇಷ ನ್ಯಾಯಾಲಯದ ಸರ್ಕಾರಿ ವಕೀಲರಾದ ವಿನಾಯಕ ಪಾಟೀಲ ವಾದಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.