ರಟ್ಟೀಹಳ್ಳಿ: ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 278 ಜನರು ರಕ್ತ ಮಾಡಿದರು.
ರಕ್ತದಾನ ಮಾಡಿದವರಿಗೆ ಜಿಲ್ಲಾ ಆರೋಗ್ಯ ಕೇಂದ್ರ ಹಾಗೂ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಶಂಸಾ ಪತ್ರ ವಿತರಿಸಲಾಯಿತು.
ರಕ್ತದಾನಿಗಳ ಬಳಗ, ಜಿಲ್ಲಾ ರಕ್ತ ನಿಧಿ ಕೇಂದ್ರ, ರಟ್ಟೀಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ನೇತೃತ್ವದಲ್ಲಿ ಜರುಗಿದ ಶಿಬಿರದಲ್ಲಿ ಕಂಪು ಗೆಳೆಯರ ಬಳಗ, ನಮ್ಮೂರು-ನಮ್ಮವರು, ಆರ್ಯವೈಶ್ಯ ಸಮಾಜ, ದೈವಜ್ಞ ಬ್ರಾಹ್ಮಣ ಸಮಾಜ ಸೇರಿದಂತೆ 20ಕ್ಕೂ ಹೆಚ್ಚು ಸಂಘಟನೆಗಳು, ಕಾಲೇಜು ವಿದ್ಯಾರ್ಥಿಗಳು, ಸ್ವಸಹಾಯ ಸಂಘಗಳು ಪಾಲ್ಗೊಂಡಿದ್ದವು.
ರಟ್ಟೀಹಳ್ಳಿ ಪಟ್ಟಣದ ರಕ್ತದಾನಿಗಳ ಬಳಗ ಜಿಲ್ಲಾ ರಕ್ತ ನಿಧಿ ಕೇಂದ್ರ ಸ್ತಳೀಯ ಸಮುದಾಯ ಆರೋಗ್ಯ ಕೇಂದ್ರದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.