ADVERTISEMENT

ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡದ ಶಂಕುಸ್ಥಾಪನೆ ಇಂದು

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 16:31 IST
Last Updated 8 ಜೂನ್ 2025, 16:31 IST

ರಟ್ಟೀಹಳ್ಳಿ: ತಾಲ್ಲೂಕಿನ ಮೇದೂರು ಗ್ರಾಮದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ₹5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಯಲದ ಕಟ್ಟಡ ಶಂಕುಸ್ಥಾಪನಾ ಸಮಾರಂಭವು ಜೂನ್‌ 9ರಂದು  ಮಧ್ಯಾಹ್ನ 1 ಗಂಟೆಗೆ ಗಜಾನನ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜರುಗಲಿದೆ.

ಸಮಾರಂಭದ ಅಧ್ಯಕ್ಷತೆ ಮತ್ತು ಶಂಕುಸ್ಥಾಪನೆಯನ್ನು ಶಾಸಕ ಯು.ಬಿ. ಬಣಕಾರ ನೆರವೇರಿಸಲಿದ್ದಾರೆ.  ರಾಜಕೀಯ ಮುಖಂಡರು ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಸೇರಿದಂತೆ ಜಿಲ್ಲೆ ತಾಲ್ಲೂಕುಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT