ADVERTISEMENT

ರಟ್ಟೀಹಳ್ಳಿ | ಗುಂಡಿಮಯವಾದ ರಸ್ತೆ: ಜನರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 3:01 IST
Last Updated 26 ಜುಲೈ 2025, 3:01 IST
ರಟ್ಟೀಹಳ್ಳಿ ಪಟ್ಟಣದ ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಹಲವು ಗುಂಡಿಗಳು ನಿರ್ಮಾಣಗೊಂಡು ರಸ್ತೆ ಸಂಪೂರ್ಣ ಹದಗೆಟ್ಟಿದೆ. ಗುರುವಾರ ಸ್ಥಳೀಯರು ಗುಂಡಿಗಳ ಮುಂದೆ ಪ್ರತಿಭಟನೆ ನಡೆಸಿದರು
ರಟ್ಟೀಹಳ್ಳಿ ಪಟ್ಟಣದ ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಹಲವು ಗುಂಡಿಗಳು ನಿರ್ಮಾಣಗೊಂಡು ರಸ್ತೆ ಸಂಪೂರ್ಣ ಹದಗೆಟ್ಟಿದೆ. ಗುರುವಾರ ಸ್ಥಳೀಯರು ಗುಂಡಿಗಳ ಮುಂದೆ ಪ್ರತಿಭಟನೆ ನಡೆಸಿದರು   

ರಟ್ಟೀಹಳ್ಳಿ: ಪಟ್ಟಣದ ಹೊಸ್ ಬಸ್ ನಿಲ್ದಾಣ ಮುಖ್ಯರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣಗೊಂಡಿದ್ದು, ರಸ್ತೆ ಸಂಪೂರ್ಣ ಹದಗೆಟ್ಟಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳು ರಸ್ತೆ ದುರಸ್ತಿಗೆ ಯಾವ ಕ್ರಮವನ್ನೂ ತೆಗೆದುಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಗುರುವಾರ ಆಕ್ರೋಶ ವ್ಯಕ್ತಪಡಿಸಿದರು. 

ನಿತ್ಯ ಈ ಮಾರ್ಗದಲ್ಲಿ ಸಂಚರಿಸುವ ಪಾದಚಾರಿಗಳು, ದ್ವಿಚಕ್ರವಾಹನ ಸವಾರರು ಗುಂಡಿಗಳಲ್ಲಿ ಬಿದ್ದು ಕೈಕಾಲು ಮುರಿದುಕೊಳ್ಳುವುದು ಸಾಮಾನ್ಯವಾಗಿದೆ. ತಕ್ಷಣ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ನಿವಾಸಿಗಳಾದ ನಾಗರಾಜ ದ್ಯಾವಕ್ಕಳವರ, ಶಿವರಾಜ ದ್ಯಾವಕ್ಕಳವರ, ಹರೀಶ ಅಡ್ಮನಿ, ಸ್ಥಳೀಯ ಆಟೊ ಚಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.