ADVERTISEMENT

ರಟ್ಟೀಹಳ್ಳಿ|ಕನ್ನಡ ಸಾಹಿತ್ಯ ಸಮ್ಮೇಳನ:ಸಾಹಿತಿ ಜಯಪ್ಪ ಹೊನ್ನಾಳಿ ಸಮ್ಮೇಳನಾಧ್ಯಕ್ಷ

ಹಳ್ಳೂರಿನಲ್ಲಿ ರಟ್ಟೀಹಳ್ಳಿ ತಾಲ್ಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ. 31ಕ್ಕೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2026, 2:48 IST
Last Updated 5 ಜನವರಿ 2026, 2:48 IST
ರಟ್ಟೀಹಳ್ಳಿ ಪಟ್ಟಣದ ಭಂಟೇಶ‍್ವರ ದೇವಸ್ಥಾನದಲ್ಲಿ ಶನಿವಾರ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಶಾಸಕ ಯು.ಬಿ. ಬಣಕಾರ ಮಾತನಾಡಿದರು
ರಟ್ಟೀಹಳ್ಳಿ ಪಟ್ಟಣದ ಭಂಟೇಶ‍್ವರ ದೇವಸ್ಥಾನದಲ್ಲಿ ಶನಿವಾರ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಶಾಸಕ ಯು.ಬಿ. ಬಣಕಾರ ಮಾತನಾಡಿದರು   

ರಟ್ಟೀಹಳ್ಳಿ: ‘ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಜ. 31ಕ್ಕೆ ತಾಲ್ಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಜಯಪ್ಪ ಹೊನ್ನಾಳಿ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದರು.

ಪಟ್ಟಣದ ಬಂಟೇಶ‍್ವರ ದೇವಸ್ಥಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕ ಆಯೋಜಿಸಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ  ಮಾತನಾಡಿದರು.

ಸಾಹಿತಿ ಜಯಪ್ಪ ಹೊನ್ನಾಳಿ ಅವರು ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದು, ಅವರು ಮೂಲತಃ ಮಾಸೂರಿನವರು. ಕನ್ನಡ ಭಾಷೆಗೆ ಅಪಾರ ಕೊಡುಗೆ ನೀಡಿದ್ದು, ಜಿಲ್ಲೆಗೆ ಹಾಗೂ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಇವರ ಆಯ್ಕೆಗೆ ಶಾಸಕ ಯು.ಬಿ. ಬಣಕಾರ ಸೇರಿದಂತೆ ಪರಿಷತ್ತಿನ ಪದಾಧಿಕಾರಿಗಳು ಸಹಮತ ವ್ಯಕ್ತಪಡಿಸಿದರು.

ADVERTISEMENT

ಪೂರ್ವಭಾವಿ ಸಭೆಯ ನೇತೃತ್ವ ವಹಸಿದ್ದ ಶಾಸಕ ಯು.ಬಿ. ಬಣಕಾರ ಮಾತನಾಡಿ, ‘ತಾಲ್ಲೂಕು ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಹಾಗೂ ಅಚ್ಚುಕಟ್ಟು ನಿರ್ವಹಣೆಗೆ ಪರಿಷತ್ತಿನ ಪದಾಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ, ನಾನೂ ಸಹಕಾರ ನೀಡುವೆ’ ಎಂದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಸಿ.ತುಮ್ಮಿನಕಟ್ಟಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ, ಗ್ಯಾರಂಟಿ ಯೋಜನೆ ಅಧ್ಯಕ್ಷ ನಾರಾಯಣಪ್ಪ ಗೌರಕ್ಕನವರ, ಮಲ್ಲಿಕಾರ್ಜುನ ಬುರಡಿಕಟ್ಟಿ, ಕೆ.ಎಂ.ಎಫ್. ಮಾಜಿ ನಿರ್ದೇಶಕ ಹನುಮಂತಗೌಡ ಭರಮಣ್ಣನವರ, ಸಾಹಿತಿ ನಿಂಗಪ್ಪ ಚಳಗೇರಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಪಿ.ಡಿ. ಬಸನಗೌಡ್ರ, ವೀರನಗೌಡ ಪ್ಯಾಟೀಗೌಡ್ರ, ಪ್ರಾಚಾರ್ಯ ರಾಘವೇಂದ್ರ ಎ.ಜಿ. ಕೆ.ಆರ್. ಕೋಣ್ತಿ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.